ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಮೊದಲ ದಿನವೇ 20 ಕೋಟಿ ರೂ. ಕಲೆಕ್ಷನ್ ಮಾಡಿದೆ.
ಬೆಳಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನಗಳು ಸೇರಿ ಎಲ್ಲಾ ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದ್ದು, ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್, ನಟ ಧನ್ವಿರ್, ನಟಿ ರಚನಾ ರೈ ಸೇರಿದಂತೆ ಅನೇಕರು ಸಿನಿಮಾ ವೀಕ್ಷಿಸಿದ್ದಾರೆ.
ರಾಜ್ಯದೆಲ್ಲೆಡೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ. ಸುಮಾರು 2.80 ಲಕ್ಷ ಟಿಕೆಟ್ ಮುಂಗಡ ಬುಕಿಂಗ್ ಆಗಿದ್ದು ಸಿನಿಮಾ ಬಿಡುಗಡೆಗೂ ಮೊದಲೆ 8 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ಬುಕಿಂಗ್ ವಿಳಂಬವಾಗಿದ್ದು ಕಲೆಕ್ಷನ್ ಮೇಲೆ ಪರಿಣಾಮ ಬೀರಿದಂತಿದೆ. ಮೊದಲ ದಿನ ಡೆವಿಲ್ 20 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
