Shivamogga Dasara 2023 : ರೈತ ದಸರಾದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ

ಶಿವಮೊಗ್ಗ : ನಾಡಹಬ್ಬ ಶಿವಮೊಗ್ಗ ದಸರಾ 2023 ಅಂಗವಾಗಿ ಅ.18 ರಂದು ಬೆಳಗ್ಗೆ 9.00ಕ್ಕೆ ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೈನ್ಸ್ ಮೈದಾನದಲ್ಲಿ “ರೈತ ದಸರಾ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ರೈತ ದಸರಾ ಸಮಿತಿ ಅಧ್ಯಕ್ಷೆ ಶ್ರೀಮತಿ ಮೆಹೆಕ್ ಷರೀಫ್ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದ ಅಂಗವಾಗಿ ರೈತರ ಜಾಥಾ ಹಮ್ಮಿಕೊಂಡಿದ್ದು, ರೈತರು ತಮ್ಮ ಅಲಂಕೃತ ಎತ್ತಿನಗಾಡಿ, ಟಿಲ್ಲರ್, ಟ್ರ್ಯಾಕ್ಟರ್ಗಳಲ್ಲಿ ಸೈನ್ಸ್ ಮೈದಾನದಿಂದ ಬಿ.ಹೆಚ್.ರಸ್ತೆಯಿಂದ ಕುವೆಂಪು ರಂಗಮಂದಿರ ತಲುಪಲಿದ್ದಾರೆ.

ಕುವೆಂಪು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಚಿತ್ರದುರ್ಗ ಜಿಲ್ಲೆಯ ಪ್ರಗತಿಪರ ರೈತ, ಉದಯೋನ್ಮುಖ ಕೃಷಿ ಪಂಡಿತ ರಾಜ್ಯ ಪ್ರಶಸ್ತಿ ವಿಜೇತ ಜ್ಞಾನೇಶ್ವರ ಕೆ.ಆರ್. ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಎಸ್. ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕೃಷಿ ಮತ್ತು ಕೃಷಿಗೆ ಸಂಬಂಧಪಟ್ಟ ಇತರೆ ಇಲಾಖೆಗಳ ಸಹಯೋಗದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಹಾಗೂ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂರ್ಯನಾಯ್ಕ ಇವರುಗಳು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ 10 ಸಾಧಕರನ್ನು ಸನ್ಮಾನಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಶಿಮುಲ್, ಕೃಷಿ ವಿವಿ ಹಾಗೂ ರೈತ ಮುಖಂಡರುಗಳು ಸಹಕಾರ ನೀಡುವರು.ಈ ಕಾರ್ಯಕ್ರಮದಲ್ಲಿ ರೈತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರೈತ ದಸರಾ ಸಮಿತಿಯು ಕೋರಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read