HomeLive NewsBREAKING: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್...

BREAKING: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡಬೇಕೆಂಬ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ. ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ. ಸರ್ಕಾರದ ಕ್ರಮಕ್ಕೆ ತಡೆ ನೀಡಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರಿನ ರಾಜಮನಎತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿಯಾಗಿದೆ. ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular