HomeLatest NewsBREAKING: ನಾಡದೇವಿ ಚಾಮುಂಡಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಲೇಖಕಿ...

BREAKING: ನಾಡದೇವಿ ಚಾಮುಂಡಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಲೇಖಕಿ ಬಾನು ಮುಷ್ತಾಕ್

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವಿ ಚಾಮುಂಡಿ ತಾಯಿ ದರ್ಶನ ಪಡೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ದಸರಾ ಉದ್ಘಾಟಕಿ ಲೇಖಕಿ ಬಾನು ಮುಷ್ತಾಕ್ ಹಾಗೂ ಅಧಿಕಾರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಈಡುಗಾಯಿ ಒಡೆದು ದೇವಸ್ಥಾನ ಪ್ರವೇಶಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ನಾಡದೇವಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಬಾನು ಮುಷ್ತಾಕ್, ಸಿಎಂ ಸಿದ್ದರಾಮಯ್ಯ, ಸಚಿವರು ಮಂಗಳಾರತಿ ಪಡೆದರು. ಈ ವೇಳೆ ಸಚಿವರು ಹಾಗೂ ದಸರಾ ಉದ್ಘಾಟಕಿ ಲೇಖಕಿ ಬಾನು ಮುಷ್ತಾಕ್ ಅವರಿಗೆ ಫಲತಾಂಬೂಲ ನೀಡಿ, ಶಾಲು ಹೊದಿಸಿ ಗೌರವಿಸಲಾಯಿತು

For Latest News Updates, Join Our Whatsapp Community🚩
RELATED ARTICLES

Most Popular