HomeKarnatakaವಿಶ್ವವಿಖ್ಯಾತ ಮೈಸೂರು ದಸರಾ ಗೋಲ್ಡ್ ಕಾರ್ಡ್, ಟಿಕೆಟ್ ಬುಕ್ಕಿಂಗ್ ಆರಂಭ

ವಿಶ್ವವಿಖ್ಯಾತ ಮೈಸೂರು ದಸರಾ ಗೋಲ್ಡ್ ಕಾರ್ಡ್, ಟಿಕೆಟ್ ಬುಕ್ಕಿಂಗ್ ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ದಸರಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಗಳ ಆನ್ಲೈನ್ ಬುಕ್ಕಿಂಗ್ ಆರಂಭವಾಗಿದೆ.

ಮೈಸೂರು ದಸರಾ ಜಂಬೂ ಸವಾರಿ, ಪಂಜಿನ ಕವಾಯತು, ಡ್ರೋನ್ ಶೋ ವೀಕ್ಷಣೆಗೆ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಅನ್ನು ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಲು ಮೈಸೂರು ಜಿಲ್ಲಾಡಳಿತ ಸೆಪ್ಟೆಂಬರ್ 21ರ ಬೆಳಿಗ್ಗೆ 11:30 ರಿಂದ ಅವಕಾಶ ಕಲ್ಪಿಸಿದೆ.

ಗೋಲ್ಡ್ ಕಾರ್ಡ್ ಹೊಂದಿದವರು ಜಂಬೂ ಸವಾರಿ, ಪಂಜಿನ ಕವಾಯತು, ಚಾಮುಂಡಿ ಬೆಟ್ಟ, ಚಾಮರಾಜೇಂದ್ರ ಮೃಗಾಲಯ, ಮೈಸೂರು ಅರಮನೆ ಮತ್ತು ಒಂದು ದಿನದ ಡ್ರೋನ್ ಶೋ ವೀಕ್ಷಿಸಬಹುದಾಗಿದೆ. ಗೋಲ್ಡ್ ಕಾರ್ಡ್ ಗೆ ಕಳೆದ ವರ್ಷದ ದರವೇ 6500 ರೂ. ನಿಗದಿಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರು ದಸರಾದ ಅಧಿಕೃತ ಜಾಲತಾಣ https://www.mysoredasara.gov.in ವೆಬ್ಸೈಟ್ ನಲ್ಲಿ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಬುಕ್ಕಿಂಗ್ ಮಾಡಬಹುದು ಎಂದು ಹೇಳಲಾಗಿದೆ.

ಮೈಸೂರು ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಲು ಆಗ್ರಹ

ಮೈಸೂರು: ಮೈಸೂರು ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಲು ಮೈಸೂರು ದೃಶ್ಯ ಕಲಾವಿದರ ಸಂಘದ ಅಧ್ಯಕ್ಷ ಪ್ರಕಾಶ್ ಚಿಕ್ಕಪಾಳ್ಯ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ದಸರಾಗೆ ಸಂಬಂಧಿಸಿದ ಸ್ಥಳೀಯ ಚಿತ್ರ, ಶಿಲ್ಪ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿಲ್ಲ. ವಸ್ತು ಪ್ರದರ್ಶನ ಮಳಿಗೆ, ಸ್ತಬ್ಧಚಿತ್ರ, ಸ್ವಾಗತ ಕಮಾನು ನಿರ್ಮಾಣ ಹಾಗೂ ಇತರೆ ಚಟುವಟಿಕೆಗಳಲ್ಲಿ ಹೊರಗಿನವರಿಗೇ ಆದ್ಯತೆ ನೀಡಲಾಗುತ್ತಿದೆ. ಹೀಗಾಗಿ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸ್ಥಳೀಯ ಕಲಾವಿದರನ್ನು ನಿರ್ಲಕ್ಷಿಸಿ ಕಲಾವಿದರಲ್ಲದ ರಾಜಕಾರಣಿಗಳ ಬೆಂಬಲಿಗರು, ಬಂಡವಾಳಶಾಹಿ ಖಾಸಗಿ ಇವೆಂಟ್ಸ್ ಸಂಸ್ಥೆಗಳು, ಇತರೆ ಗುತ್ತಿಗೆದಾರರಿಗೆ ರಾಜಕಾರಣಿಗಳ ಶಿಫಾರಸಿನ ಮೂಲಕ ನೀಡುತ್ತಿರುವುದು ಸರಿಯಲ್ಲ. ಈ ಚಟುವಟಿಕೆ ನಂಬಿ ಇಲ್ಲಿನ 1500ಕ್ಕೂ ಹೆಚ್ಚು ಕಲಾವಿದರ ಕುಟುಂಬಗಳು ಬದುಕುತ್ತಿವೆ. ಹೀಗಾಗಿ ಇವರು ಬೀದಿ ಪಾಲಾಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ದಸರಾದ ಎಲ್ಲಾ ಕೆಲಸವನ್ನು ನೇರವಾಗಿ ಕಲಾವಿದರಿಗೆ ನೀಡಬೇಕು. ಸ್ತಬ್ಧಚಿತ್ರ ಸಮಿತಿ ನೋಡಲ್‌ ಅಧಿಕಾರಿ ಗಳ ಜತೆಗೆ ಕಲಾವಿದರ ಸಭೆ ನಡೆಸಬೇಕು. ಸ್ತಬ್ಧಚಿತ್ರ, ವಸ್ತು ಪ್ರದರ್ಶನ ಮಳಿಗೆ ನಿರ್ಮಾಣ ಸ್ಥಳಗಳಲ್ಲಿ ಮೂಲ ಭೂತ ಸೌಕರ್ಯ ಒದಗಿಸಬೇಕು. ಬನ್ನಿಮಂಟಪದಲ್ಲಿ ಸ್ತಬ್ಧಚಿತ್ರಗಳಿಗೆ ಸರಿಯಾದ ಭದ್ರತೆ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕೆ.ಆರ್. ಗೋಪಾಲಕೃಷ್ಣ, ಅಕ್ಕಲ್ ಪಾಷ, ದೇವಿಪ್ರಸಾದ್ ಶೆಟ್ಟಿ, ಎನ್.ಎಸ್. ರಮೇಶ್, ಈ.ವಿ. ಅಕ್ಷಯ್ ಕುಮಾರ್‌ ಉಪಸ್ಥಿತರಿದ್ದರು.

ಸೆ.25 ರಂದು ನೇರ ಸಂದರ್ಶನ

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆಪ್ಟೆಂಬರ್, 25 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ “ನೇರ ಸಂದರ್ಶನ”ವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ, “ಪೆಂಟಾಟೆಕ್ ಟೆಕ್ನಿಕಲ್ ಕಂಪ್ಯೂಟರ್ ಸೆಂಟರ್, ಮಡಿಕೇರಿ” ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ನೇರ ಸಂದರ್ಶನದಲ್ಲಿ ಅಕೌಂಟೆಂಟ್ ಕಂಪ್ಯೂಟರ್, ಹಾರ್ಡ್‍ವೇರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಡಿಪ್ಲೋಮಾ, ಐಟಿಐ, ಬಿಎಸ್ಸಿ, ಬಿಸಿಎ., ಬಿಕಾಂ, ಬಿಬಿಎ. ವಿದ್ಯಾರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ವಯೋಮಿತಿ 18 ರಿಂದ 35 ವರ್ಷಗಳು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ  ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿಯವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್– 8296020826 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular