ಈ ಬಾರಿ ಸರಳ ದಸರಾ: ರಾಜ್ಯದಲ್ಲಿ ಬರ ಪರಿಸ್ಥಿತಿ, ರೈತರಿಗೆ ಸಂಕಷ್ಟ ಹಿನ್ನೆಲೆ ಸರಳವಾಗಿ ನಾಡಹಬ್ಬ ಆಚರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರ ಈ ಬಾರಿ ಸರಳ ದಸರಾ ಆಚರಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

https://twitter.com/CMahadevappa/status/1704837094756278761

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read