ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ವಿಸ್ತರಿಸಲಾಗಿದ್ದು, ಶಿಕ್ಷಕರನ್ನು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸೂಚಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ರಜೆಗಳಿಂದಾಗಿ ಮಕ್ಕಳಿಗೆ ಪಾಠಗಳಿಗೆ ತೊಂದರೆಯಾಗದಂತೆ ವಿಶೇಷ ತರಗತಿ ನಡೆಸಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಮೀಕ್ಷಾ ಕಾರ್ಯಕ್ಕಾಗಿ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಣೆ ಮಾಡಲಾಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ. ರಜೆಯ ದಿನಗಳನ್ನು ಸರಿದೂಗಿಸಲು ವಿಶೇಷ ತರಗತಿಗಳನ್ನು ನಡೆಸಲಾಗುವುದು ಎಂದರು.
ರಜೆ ವಿಸ್ತರಣೆಯಿಂದ ಅಥವಾ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರಿಂದ ಯಾವುದೇ ಮಕ್ಕಳಿಗೂ ವಿದ್ಯಾಭ್ಯಾಸಕ್ಕೆ, ಕಲಿಕೆಗೆ ತೊಂದರೆಯಾಗುವುದಿಲ್ಲ. ಸ್ಪೆಷಲ್ ಕ್ಲಾಸ್ ಗಳನ್ನು ನಡೆಸಿ ಪಾಠ-ಪಠ್ಯಗಳನ್ನು ಹೇಳಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು.