ಮೈಸೂರು : ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವ-2026 ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026” ಅನ್ನು ಆಯೋಜಿಸಲಾಗಿದೆ.
ಈ ಮೇಳವು ಮೈಸೂರಿನ ಹಳೆಯ ಡಿ.ಸಿ. ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯಲಿದೆ. ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕನ್ನಡ ಪ್ರಕಾಶಕರು ಮತ್ತು ಮಾರಾಟಗಾರರು ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು ಕಚೇರಿಯಲ್ಲಿ, ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://kpp.karnataka.gov.in ಮೂಲಕ ಉಚಿತವಾಗಿ ಪಡೆದುಕೊಳ್ಳಬಹುದು.
ಅರ್ಜಿಯೊಂದಿಗೆ ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು “ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು” ಇವರ ಹೆಸರಿಗೆ ಪಡೆದು ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 05.10.2026 ರ ಸಂಜೆ 5.00 ಗಂಟೆಯೊಳಗೆ ನೋಂದಾಯಿತ ಅಂಚೆ ಅಥವಾ ಮುದ್ದಾಂ ಮೂಲಕ “ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002” ಇವರಿಗೆ ಸಲ್ಲಿಸಬೇಕಾಗಿದೆ. ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22484516 ಅನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ
ಕರ್ನಾಟಕ ಮಹಿರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2026-27 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ವಯಂ ಉದ್ಯೋಗ ಕಾರ್ಯಕ್ರಮಗಳಲ್ಲಿ ನೇರಸಾಲ ಯೋಜನೆ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಯೋಜನೆ ಮತ್ತು ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮಹಿಳಾ ಸ್ವಸಹಾಯ ಸಂಘಗಳಿಗೆ ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿಯಲ್ಲಿ ಪರಿಶಿಷ್ಟ ಪಂಗಡದ ಸಮುದಾಯದ ಫಲಾಪೇಕ್ಷಿತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಪ.ಪಂ.ಕ್ಕೆ ಸೇರಿದವರಾಗಿರಬೇಕು. ವ್ಯವಸಾಯಕ್ಕೆ ಸಂಬಂಧಪಟ್ಟಂತೆ 18 ರಿಂ 60, ವಾಹನ, ಸ್ವಯಂ ಉದ್ಯೋಗ ಉದ್ದೇಶಗಳಿಗೆ ಸಂಬಂಧಪಟ್ಟಂತೆ 18 ರಿಂದ 50 ವಯೋಮಾನದವರಾಗಿರಬೇಕು. ಕೊಳವೆಬಾವಿ ಸೌಲಭ್ಯಕ್ಕೆ ಯಾವುದೇ ವಯೋಮಿತಿ ಇರುವುದಿಲ್ಲ. ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ. 1.50 ಲಕ್ಷ ಹಾಗೂ ನಗರ ಪ್ರದೇಶದವರಿಗೆ 2.00 ಲಕ್ಷಗಳ ಮಿತಿಯಲ್ಲಿರಬೇಕು. ಕುಟುಂಬದ ಯಾವುದೇ ಸದಸ್ಯರುವ ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು ಹಾಗೂ ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ಮಹಿಳೆಯರಿಗೆ ಶೇ. 33 ರಷ್ಟು ಮತ್ತು ಅಂಗವಿಕಲರಿಗೆ ಶೇ.5 ರಷ್ಟು ಗುರಿಯಲ್ಲಿ ಮೀಸಲಾತಿ ಕಲ್ಪಿಸಲಾಗುವುದು.
ಆಸಕ್ತ ಅರ್ಜಿದಾರರು ವೆಬ್ ಪೋರ್ಟಲ್https://sevasindhu.karnataka.gov.in ಮೂಲಕ ದಿ:17/10/2026 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂ.: 08182-276776 ಅಥವಾ https://kmvstdcl.karnataka.gov.in ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

