BREAKING : ಬಾಗಲಕೋಟೆಯ ಬಂಡಿಗಣಿ ಮಠದ ‘ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ’ ಲಿಂಗೈಕ್ಯ.!

ಬಾಗಲಕೋಟೆ: ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ (75) ಲಿಂಗೈಕ್ಯರಾಗಿದ್ದಾರೆ.
ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ .

ಲಿವರ್ ಸಮಸ್ಯೆ ಉಲ್ಬಣಿಸಿದ ಹಿನ್ನೆಲೆ ಕಳೆದ ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳು ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದರು.

ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ನಗರದ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಸ್ವಾಮೀಜಿಯಾಗಿದ್ದ ಇವರ ನಿಧನದಿಂದ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ದಾಸೋಹದ ಮೂಲಕವೇ ಹೆಸರುವಾಸಿಯಾಗಿದ್ದ ಶ್ರೀಗಳು ಇತ್ತೀಚೆಗೆ ಬಂಡಿಗಣಿಯಲ್ಲಿ ಸರ್ವಧರ್ಮ ಸಮಾವೇಶವನ್ನು ಆಯೋಜಿಸಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಆಗಮಿಸಿದ್ದರು. ನಾಳೆ ಸಂಜೆ 4 ಗಂಟೆಗೆ ಶ್ರೀಗಳ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read