ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫೆಬ್ರವರಿ/ಮಾರ್ಚ್ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿದೆ.
2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ದಿನಾಂಕ 10-11-2025 ರವರೆಗೆ ರೂ 500/-ದಂಡಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು.
ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಿ ಆದೇಶಿಸಲಾಗಿದೆ.
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಿ ಶುಲ್ಕ ಪಾವತಿಸಲು ಕಡೆಯ ದಿನಾಂಕವನ್ನು 19-11-2025 ರಿಂದ 29-11-2025 ರವರೆಗೆ ವಿಸ್ತರಿಸಲಾಗಿದೆ.
ಜಿಲ್ಲಾ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ರವರು ಪ್ರಾಂಶುಪಾಲರಿಂದ ಸ್ವೀಕರಿಸಿದ ಖಾಸಗಿ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿ ತಮ್ಮ ಕಛೇರಿಯಲ್ಲಿಯೇ ಕಾಯ್ದಿರಿಸುವುದು ಹಾಗೂ ಅವಶ್ಯಕತೆ ಇದ್ದಲ್ಲಿ ಮಾತ್ರ ಮಂಡಳಿಯ ಪರಿಶೀಲನೆಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

