HomeLatest Newsದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕ ವಿಸ್ತರಣೆ

ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫೆಬ್ರವರಿ/ಮಾರ್ಚ್ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿದೆ.

2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ದಿನಾಂಕ 10-11-2025 ರವರೆಗೆ ರೂ 500/-ದಂಡಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು.

ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಿ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಿ ಶುಲ್ಕ ಪಾವತಿಸಲು ಕಡೆಯ ದಿನಾಂಕವನ್ನು 19-11-2025 ರಿಂದ 29-11-2025 ರವರೆಗೆ ವಿಸ್ತರಿಸಲಾಗಿದೆ.

ಜಿಲ್ಲಾ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ರವರು ಪ್ರಾಂಶುಪಾಲರಿಂದ ಸ್ವೀಕರಿಸಿದ ಖಾಸಗಿ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿ ತಮ್ಮ ಕಛೇರಿಯಲ್ಲಿಯೇ ಕಾಯ್ದಿರಿಸುವುದು ಹಾಗೂ ಅವಶ್ಯಕತೆ ಇದ್ದಲ್ಲಿ ಮಾತ್ರ ಮಂಡಳಿಯ ಪರಿಶೀಲನೆಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular