ಕಲಬುರಗಿ : ಚಿತ್ತಾಪುರದಲ್ಲಿ ಆರ್ ಎಸ್ ಎಸ್ (RSS) ಪಥಸಂಚಲನಕ್ಕೆ ಇಂದು ದಿನಾಂಕ ನಿಗದಿಯಾಗುವ ಸಾಧ್ಯತೆಯಿದ್ದು, ಎಲ್ಲರ ಚಿತ್ತ ಹೈಕೋರ್ಟ್ ನತ್ತ ಇದೆ.
ಹೌದು, ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೋರಿ ಆರ್ ಎಸ್ ಎಸ್ ಅರ್ಜಿ ಸಲ್ಲಿಸಿದ್ದು, ಇಂದು 2:30 ಕ್ಕೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಆರ್ ಎಸ್ ಎಸ್ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದ ಮಂಡಿಸಲಿದ್ದಾರೆ.ನವೆಂಬರ್ 13 ಅಥವಾ 16 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೇಳಿದೆ. ಕೋರ್ಟ್ ಪಥಸಂಚಲನಕ್ಕೆ ಅನುಮತಿ ನೀಡುತ್ತಾ..? ಕಾದು ನೋಡಬೇಕು. ಹಾಗಾಗಿ ಎಲ್ಲರ ಚಿತ್ತ ಹೈಕೋರ್ಟ್ ನತ್ತ ಇದೆ.
