HomeKarnatakaBIG NEWS : ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ನಿಯೋಜಿಸದಂತೆ 'ಶಿಕ್ಷಣ ಇಲಾಖೆ'  ಮಹತ್ವದ ಆದೇಶ.!

BIG NEWS : ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ನಿಯೋಜಿಸದಂತೆ ‘ಶಿಕ್ಷಣ ಇಲಾಖೆ’  ಮಹತ್ವದ ಆದೇಶ.!

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ಶಾಲಾ ಶಿಕ್ಷಣ ಇಲಾಖೆಯು ಅಧಿಕೃತ ದಿನಾಂಕವನ್ನು ಪ್ರಕಟಿಸಿದೆ. ಈ ಕುರಿತು ಆಯುಕ್ತರ ಕಚೇರಿಯಿಂದ ಮಹತ್ವದ ಜ್ಞಾಪನ ಪತ್ರ ಹೊರಡಿಸಲಾಗಿದೆ.

ಬಿಡುಗಡೆ ಮತ್ತು ವರದಿ ದಿನಾಂಕ : ವರ್ಗಾವಣೆಗೊಂಡ ಶಿಕ್ಷಕರು ಏಪ್ರಿಲ್ 09, 2026 ರಂದು ತಮ್ಮ ಪ್ರಸ್ತುತ ಕರ್ತವ್ಯದಿಂದ ಬಿಡುಗಡೆ ಹೊಂದಲಿದ್ದಾರೆ. ಮರುದಿನವೇ ಅಂದರೆ ಏಪ್ರಿಲ್ 10, 2026 ರಂದು ನಿಯೋಜಿತಗೊಂಡ ಹೊಸ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ.

ಗಣತಿ ಕಾರ್ಯದಿಂದ ವಿನಾಯಿತಿ: ವರ್ಗಾವಣೆ ಪ್ರಕ್ರಿಯೆಯಲ್ಲಿ ಬೇರೆ ತಾಲೂಕುಗಳಿಗೆ ಆಯ್ಕೆಯಾದ ಶಿಕ್ಷಕರನ್ನು ಯಾವುದೇ ರೀತಿಯ “ಗಣತಿ” (Census) ಕಾರ್ಯಗಳಿಗೆ ನಿಯೋಜಿಸಬಾರದು ಎಂದು ಶಿಕ್ಷಣ ಇಲಾಖೆಯ ನಿರ್ದೇಶಕರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳ ಹಿತದೃಷ್ಟಿ: ವರ್ಗಾವಣೆ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಹಾಗೂ ಶಿಕ್ಷಕರು ಸಕಾಲದಲ್ಲಿ ಹೊಸ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಈ ಹಿಂದೆ ಪತ್ರ ಬರೆದು, ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳದೆ ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು. ಈ ಮನವಿಯನ್ನು ಪರಿಶೀಲಿಸಿದ ಇಲಾಖೆಯು, ವರ್ಗಾವಣೆಗೊಂಡ ಅಭ್ಯರ್ಥಿಗಳು ಯಾವುದೇ ಅಡಚಣೆಯಿಲ್ಲದೆ ಹೊಸ ಹುದ್ದೆಗೆ ಹಾಜರಾಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾ ಉಪನಿರ್ದೇಶಕರು (DDPI) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (BEO) ನಿರ್ದೇಶನ ನೀಡಿದೆ.

ಇಲಾಖೆಯ ಸೂಚನೆ: “ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆಗೊಳಿಸಲು ಮತ್ತು ಹೊಸ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಅಡೆತಡೆ ಉಂಟಾಗದಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular