ಚಿಕ್ಕಮಗಳೂರು : ಇಂದಿನಿಂದ ಮೂರು ದಿನ ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಆರಂಭವಾಗಲಿದ್ದು, ಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆಯಲಿದ್ದಾರೆ.
ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಹಮ್ಮಿಕೊಂಡಿರುವ ಮೂರು ದಿನಗಳ ದತ್ತ ಜಯಂತಿಗೆ ಇಂದು ಚಾಲನೆ ದೊರೆಯಲಿದ್ದು, ದತ್ತ ಜಯಂತಿ ಅಂಗವಾಗಿ ಇಂದು ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ ನಡೆಯಲಿದೆ.
ಇಂದು ಬೆಳಗ್ಗೆ 9.30 ಕ್ಕೆ ಶ್ರೋ ಬೋಳ ರಾಮೇಶ್ವರ ದೇವಾಲಯದಿಂದ ಸಂಕೀರ್ತನಾ ಯಾತ್ರೆ ಹೊರಡಲಿದೆ. ಸೋಮವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ ನಡೆಯಲಿದ್ದು, ಡಿ. 26 ರಂದು ದತ್ತಪೀಠದಲ್ಲಿ ದತ್ತ ಜಯಂತಿಗೆ ತೆರೆ ಬೀಳಲಿದೆ.