HomeKarnatakaBIG NEWS: ಡಿ.22ರಿಂದ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ

BIG NEWS: ಡಿ.22ರಿಂದ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರಿನ ದತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಡಿಸೆಂಬರ್ 22ರಿಂದ 6 ದಿನಗಳ ಕಾಲ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ಡಿಸೆಂಬರ್ 24, 25 ಹಾಗೂ 26ರಂದು ದತ್ತಜಯಂತಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 22ರಿಂದ 27ವರೆಗೆ ಪ್ರವಾಸಿ ತಾಣಗಳು ಬಂದ್ ಇರಲಿದ್ದು, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ, ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಡಿಸೆಂಬರ್ 26ರಂದು ದತ್ತಪೀಠಕ್ಕೆ 20,000ಕ್ಕೂ ಹೆಚ್ಚು ಮಾಲಾಧಾರಿಗಳು ಆಗಮಿಸುವ ನಿರೀಕ್ಷೆ ಇದೆ. ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular