BIG NEWS: ದತ್ತಮಾಲಾ ಅಭಿಯಾನ: ದತ್ತಪೀಠದಲ್ಲಿ ಹೋಮ-ಹವನ ವಿಶೇಷ ಪೂಜೆ; ಭದ್ರತೆಗಾಗಿ 2000 ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ಇಮಾಮ್ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ದತ್ತಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ಇಂದು ಧರ್ಮಸಭೆ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆ ಬಳಿಕ ದತ್ತಮಾಲಾಧಾರಿಗಳು ಇಮಾಮ್ ದತ್ತಾತ್ರೇಯ ಪೀಠಕ್ಕೆ ತೆರಳಲಿದ್ದಾರೆ. ಅಲ್ಲಿ ಹೋಮ-ಹವನ, ವಿಶೇಷ ಪೂಜೆ ಬಳಿಕ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ.

ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಭದ್ರತೆಗಾಗಿ 2000 ಪೊಲೀಸರನ್ನು ನಿಯೋಜಿಸಲಾಗಿದೆ.

ಓರ್ವ ಎಸ್ಪಿ, ಎಎಸ್ ಪಿ, 6 ಡಿವೈ ಎಸ್ ಪಿ, 15 ಇನ್ಸ್ ಪೆಕ್ಟರ್, 100 ಸಬ್ ಇನ್ಸ್ ಪೆಕ್ಟರ್, 8 ಕೆ ಎಸ್ ಆರ್ ಪಿ, 11 ಡಿಎ ಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಕ್ಯಾಮರಾ, ಡ್ರೋನ್ ಕಣ್ಗಾವಲು ಹಾಕಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read