HomeIndiaBREAKING: RSS ಪ್ರಧಾನ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಮರು ಆಯ್ಕೆ

BREAKING: RSS ಪ್ರಧಾನ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಮರು ಆಯ್ಕೆ

ನಾಗಪುರ: ದತ್ತಾತ್ರೇಯ ಹೊಸಬಾಳೆ ಅವರು ಮೂರು ವರ್ಷಗಳ ಅವಧಿಗೆ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾಗಿದ್ದಾರೆ.

ನಾಗಪುರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಆರ್‌ಎಸ್) ಅಖಿಲ ಭಾರತೀಯ ಪ್ರತಿನಿಧಿ ವಾರ್ಷಿಕ ಸಭೆಯ ನಂತರ ದತ್ತಾತ್ರೇಯ ಹೊಸಬಾಳೆ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಭಾನುವಾರ ಮರು ಆಯ್ಕೆ ಮಾಡಿದೆ.

ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭೆ(ಎಬಿಪಿಎಸ್) (2024-2027) ದತ್ತಾತ್ರೇಯ ಹೊಸಬಾಳೆ ಜಿ ಅವರನ್ನು ಸರ್ಕಾರಿವಾಹ್ ಹುದ್ದೆಗೆ ಮರು ಆಯ್ಕೆ ಮಾಡಿದೆ. ಅವರು 2021 ರಿಂದ ಸರ್ಕಾರಿವಾಹದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2021 ರಲ್ಲಿ ಭಯ್ಯಾಜಿ ಜೋಶಿ ಅವರಿಂದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಹೊಸಬಾಳೆ(69), 2027 ರವರೆಗೆ ಸರ್ಕಾರಿವಾಹ್ ಆಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಹೇಳಿದೆ. ಹೊಸಬಾಳೆ ಅವರು 1968 ರಲ್ಲಿ ಆರ್‌ಎಸ್‌ಎಸ್‌ಗೆ ಸೇರಿದರು ಮತ್ತು ಅದರ ವಿದ್ಯಾರ್ಥಿ ವಿಭಾಗ – ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನಲ್ಲಿ ಕೆಲಸ ಮಾಡಿದರು. 2003 ರಲ್ಲಿ ಅವರು ಆರ್‌ಎಸ್‌ಎಸ್‌ನ ಬೌದ್ಧಿಕ ತರಬೇತಿ ಮತ್ತು 2009 ರಲ್ಲಿ ಸಂಘಟನೆಯ ಸರ್ಕಾರಿವಾಹ್‌ನ ಉಸ್ತುವಾರಿ ವಹಿಸಿಕೊಂಡರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular