ಬೆಂಗಳೂರು: ಮಾವನ ಜೊತೆಗೆ ಅಕ್ರಮ ಸಂಬಂಧ ಬೆಳೆಸುವಂತೆ ಸೊಸೆಗೆ ಅತ್ತೆಯೇ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಸದ್ದುಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ ಯಾಸಿನ್ ಪಾಷಾ ಮತ್ತು ಪತ್ನಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಯಾಸಿನ್ ಪಾಷಾಗೆ ಕಳೆದ ಮೇ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಲಾಗಿತ್ತು. ನಂತರದಲ್ಲಿ ಮದುವೆ ಮಾಡಲು ಹುಡುಗನ ಪೋಷಕರು ನಿರಾಕರಿಸಿದ್ದರು. ಪೋಷಕರ ವಿರೋಧಕ ನಡುವೆ ಯಾಸಿನ್ ನಿಶ್ಚಿತಾರ್ಥವಾಗಿದ್ದ ಯುವತಿ ಜೊತೆ ಮೈಸೂರಿನಲ್ಲಿ ಮದುವೆಯಾಗಿ ಮನೆಗೆ ಬಂದಿದ್ದರು.
ಇದರಿಂದ ಕೋಪಗೊಂಡ ಅತ್ತೆ ಹುಮೇರಾ ಹಾಗೂ ಮಲತಂದೆ ಅಕ್ಬರ್ ಅವರು ಸೊಸೆಗೆ ಕಿರುಕುಳ ನೀಡಿದ್ದಾರೆ ಮಾವನ ಜೊತೆಗೆ ಅನೈತಿಕ ಸಂಬಂಧ ಹೊಂದುವಂತೆ ಕಿರುಕುಳ ನೀಡಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ಆತ್ಮಹತ್ಯೆ ಮಾಡಿಕೊಳ್ಳುವಂತೆ ಬೆದರಿಸಿದ್ದಾರೆ ಎನ್ನಲಾಗಿದೆ. ನೊಂದ ಮಹಿಳೆ ದೂರು ನೀಡಿದ್ದು ಸದ್ದುಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.