HomeIndiaಸಬರಮತಿ-ದೌಲತ್ ಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

ಸಬರಮತಿ-ದೌಲತ್ ಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

ಸಬರಮತಿ-ದೌಲತ್ ಪುರ ಎಕ್ಸ್ ಪ್ರೆಸ್ ರೈಲಿನ ಎಸಿ ಬೋಗಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾಜಸ್ಥಾನದ ಸಿರೊಹಿ ಜಿಲ್ಲೆಯ ಅಬುರೋಡ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಸಬರಮತಿ-ದೌಲತ್ ಪುರ ಎಕ್ಸ್ ಪ್ರೆಸ್ ರೈಲು ಅಬು ರಸ್ತೆಯ ರೈಲು ನಿಲ್ದಾಣ ಫ್ಲಾಟ್ ಫಾರ್ಮ್ ನಲ್ಲಿ ನಿಂತಿದ್ದಾಗ ರೈಲಿನ ಕೋಚ್ ಸಂಖ್ಯೆ ಎ-1ರ ಎಸಿ ಪ್ಯಾನೆಲ್ ನಲ್ಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಸಿ ಪ್ಯಾನಲ್ ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಅಟೆಂಡರ್ ಹಾಗೂ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ರೈಲಿನಲ್ಲಿದ್ದ ಪ್ರಯಾಣಿಕರು ಗಾಬರಿಯಿಂದ ರೈಲಿನಿಂದ ಇಳಿದಿದ್ದಾರೆ. ಈ ವೇಳೆ ಕೆಲ ಕಾಲ ಗೊಂದಲ, ಆತಂಕದ ವಾತಾವರನ ನಿರ್ಮಾಣವಾಗಿತ್ತು.

ತಕ್ಷಣ ರೈಲು ಸಿಬ್ಬಂದಿಗಳು, ಅಗ್ನಿಶಾಮಕ ಸಿಬ್ಬಂದಿಗಳು ರೈಲಿನಲ್ಲಿದ್ದ ಅಗ್ನಿಶಾಮಕ ವ್ಯವಸ್ಥೆ ಬಳಿಸಿಕೊಂಡು ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular