HomeKarnatakaಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು

ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು

ದಾವಣಗೆರೆ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ನಲ್ಲಿ ನಡೆದಿದೆ.

ಮೋಹನ್ ನಾಯ್ಕ್(30), ಪೂರ್ಯಾನಾಯ್ಕ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತ ಸವಾರರು ಶಿವಮೊಗ್ಗದ ವಿನೋಬನಗರ ನಿವಾಸಿಗಳಾಗಿದ್ದಾರೆ. ಚಲಿಸುತ್ತಿದ್ದ ಬೈಕ್ ಗೆ ಹಿಂದಿನಿಂದ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದ್ದು, ಅಪಘಾತದ ನಂತರ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular