ದಾವಣಗೆರೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ.
ಪ್ರಿಯಾ (21) ಮೃತ ಯುವತಿ. ಯೋಗೇಶ್ ಗಾಯಾಳು ಯುವಕ. ದಾವಣೆಗೆ ನಿವಾಸಿಗಳಾಗಿದ್ದ ಇಬ್ಬರೂ ಕಾಲೇಜು ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾಳೆ.
ಗಾಯಾಳು ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ವಿರುದ್ಧ ಯುವತಿ ಕುಟುಂಬದವರು ಹರಿಹರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
