HomeLatest Newsಭದ್ರಾ ಬಲದಂಡೆ ಯೋಜನೆಗೆ ವಿರೋಧ: ದಾವಣಗೆರೆಯಲ್ಲಿ ತೀವ್ರಗೊಂಡ ಬಿಜೆಪಿ, ರೈತ ಸಂಘಟನೆ ಪ್ರತಿಭಟನೆ; ರೇಣುಕಾಚಾರ್ಯ ಸೇರಿದಂತೆ...

ಭದ್ರಾ ಬಲದಂಡೆ ಯೋಜನೆಗೆ ವಿರೋಧ: ದಾವಣಗೆರೆಯಲ್ಲಿ ತೀವ್ರಗೊಂಡ ಬಿಜೆಪಿ, ರೈತ ಸಂಘಟನೆ ಪ್ರತಿಭಟನೆ; ರೇಣುಕಾಚಾರ್ಯ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ

ದಾವಣಗೆರೆ: ಭದ್ರಾ ಬಲದಂಡೆ ನಾಲೆಯನ್ನು ಸೀಳಿ ಚಿಕ್ಕಮಗಳುರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಬಿಜೆಪಿ ನಾಯಕರ ನೇತೃತ್ವದಲ್ಲಿ ರೈತ ಸಂಘಟನೆಗಳು ದಾವಣಗೆರೆಯಲ್ಲಿ ಪ್ರತಿಭಟನೆ ತೀವ್ರಗೊಳಿಸಿವೆ.

ದಾವಣಗೆರೆಯ ಬಾಡಾ ಕ್ರಾಸ್ ಬಳಿ ರಾಷ್ಟ್ರೂಯ ಹೆದ್ದಾರಿ ೪೮ರಲ್ಲಿ ಜಮಾವಣೆಗೊಂಡ ರೈತರು ಹಾಗೂ ಬಿಜೆಪಿ ನಾಯಕರು ರಸ್ತೆ ತಡೆ ನಡೆಸಿ ಧರಣಿ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರಾ ನೀರು ನಮ್ಮ ಹಕ್ಕು, ಅವೈಜ್ಞಾನಿಕ ಕಾಮಗಾರಿ ಸ್ಥಗಿತಗೊಳಿಸಿ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದರು.ರಸ್ತೆ ತದೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಎಂಪಿ ರೇಣುಕಾಚಾರ್ಯ ಸೇರಿದಂತೆ ಬಿಜೆಪಿ ಮುಖಂಡರು, ಹಗೂ ಹಲವು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಪ್ರತಿಭಟನಾ ನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ. ಭದ್ರಾ ನೀರನ್ನು ರೈತರು ಬಿಟ್ಟುಕೊಡಲ್ಲ. ಸರ್ಕಾರಕ್ಕೆ ಬುದ್ಧಿಕಲಿಸಲು ಹೋರಾಟ ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular