HomeLatest NewsBIG NEWS: ತಂಗಿಯ ಅಂತ್ಯ ಸಂಸ್ಕಾರಕ್ಕೆಂದು ಬರುತ್ತಿದ್ದ ಅಕ್ಕ ಭೀಕರ ಅಪಘಾತದಲ್ಲಿ ಸಾವು!

BIG NEWS: ತಂಗಿಯ ಅಂತ್ಯ ಸಂಸ್ಕಾರಕ್ಕೆಂದು ಬರುತ್ತಿದ್ದ ಅಕ್ಕ ಭೀಕರ ಅಪಘಾತದಲ್ಲಿ ಸಾವು!

ದಾವಣಗೆರೆ: ತಂಗಿಯ ಅಂತ್ಯ ಸಂಸ್ಕಾರಕ್ಕೆಂದು ಬರುತ್ತಿದ್ದ ಅಕ್ಕ ರಸ್ತೆ ಅಪಘಾತದಲ್ಲಿ ಸಾವನ್ನಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ನಡೆದಿದೆ.

ಹರಳಹಳ್ಳಿ ನೀಲಮ್ಮ (20) ಮೃತ ದುರ್ದೈವಿ. ಜಿಗಳಿ ಗ್ರಾಮದ ಕಂಬಳಿ ಎಂಬಲ್ಲಿ ನೀಲಮ್ಮ ತಂಗಿ ಚನ್ನಬಸಮ್ಮ (68) ವಿಧಿವಶರಾಗಿದ್ದರು. ತಂಗಿಯ ಅಂತ್ಯ ಸಂಸ್ಕಾರಕ್ಕೆಂದು ಸಂಬಂಧಿಕರೊಬ್ಬರ ಬೈಕ್ ನಲ್ಲಿ ನೀಲಮ್ಮ ಬರುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಗಳಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘತದ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ನೀಲಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು ಚಾಲಕನ ನಿರ್ಲಕ್ಷ, ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular