HomeLatest NewsBIG NEWS: ಅಪರಿಚಿತ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವು

BIG NEWS: ಅಪರಿಚಿತ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವು

ದಾವಣಗೆರೆ: ಅಪರಿಚಿತ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಇಲ್ಲಿನ್ ಅಶಿರಮಗೊಂಡನಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಬೈಕ್ ಸವಾರ ಬೆಂಗಳೂರಿನತ್ತ ಸಾಗುತ್ತಿದ್ದ. ಹಿಂದಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಹೋಗಿದೆ. ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಜುನಾಥ್ (27) ಮೃತ ಯುವಕ. ಗದಗ ಜಿಲ್ಲೆಯ ಶಿಂಗ್ಲಿ ಗ್ರಾಮದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular