HomeKarnatakaನಾಳೆ ದಾವಣಗೆರೆಯಲ್ಲಿ ಬಿಜೆಪಿ ಮಹಾಸಂಗಮಕ್ಕೆ ಮೋದಿ: 10 ಲಕ್ಷ ಜನ ಭಾಗಿ

ನಾಳೆ ದಾವಣಗೆರೆಯಲ್ಲಿ ಬಿಜೆಪಿ ಮಹಾಸಂಗಮಕ್ಕೆ ಮೋದಿ: 10 ಲಕ್ಷ ಜನ ಭಾಗಿ

ದಾವಣಗೆರೆ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ 4 ಕಡೆಯಿಂದ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಾಳೆ ದಾವಣಗೆರೆಯಲ್ಲಿ ನಡೆಯಲಿದೆ.

ಮಾರ್ಚ್ 25ರಂದು ದಾವಣಗೆರೆಯಲ್ಲಿ ಬಿಜೆಪಿ ಮಹಾಸಂಗಮ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಸುಮಾರು 10 ಲಕ್ಷ ಮಂದಿ ಮಹಾಸಂಗಮ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಿಷನ್ 150 ಗುರಿಯೊಂದಿಗೆ ಮಾರ್ಚ್ 1 ರಂದು ಮಲೆ ಮಹಾದೇಶ್ವರ ಬೆಟ್ಟ, ಮಾರ್ಚ್ 2ರಂದು ನಂದಗಡ, ಮಾರ್ಚ್ 3ರಂದು ಬಸವಕಲ್ಯಾಣ ಮತ್ತು ಅವತಿದೇವನಹಳ್ಳಿಯಿಂದ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ ಆರಂಭಿಸಲಾಗಿತ್ತು. ನಾಳೆ ದಾವಣಗೆರೆಯಲ್ಲಿ ಯಾತ್ರೆಯ ಮಹಾಸಂಗಮ ನಡೆಯಲಿದೆ. ಜಿಎಂಐಟಿ ಕಾಲೇಜಿನ ಸಮೀಪ ಸಮಾವೇಶ ನಡೆಯಲಿದ್ದು, ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular