HomeJobsದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ: ವೇತನ 27 ರಿಂದ 46 ಸಾವಿರ ರೂ.ಗಳು

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ: ವೇತನ 27 ರಿಂದ 46 ಸಾವಿರ ರೂ.ಗಳು

ದಾವಣಗೆರೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿ ಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

ಮಾನ್ಯ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ಇವರ ನಡಾವಳಿ ಆದೇಶ ದಿನಾಂಕ 13-01-2026 ಪ್ರಕಾರ ಕರ್ನಾಟಕ ರಾಜ್ಯ ಪತ್ರ ಅಧಿಸೂಚನೆ ದಿನಾಂಕ 23.11.2022ರ ಅಧಿಸೂಚನೆ ಅನ್ವಯ ಮತ್ತು ಸರ್ಕಾರದ ಪತ್ರ ದಿನಾಂಕ 20-12-2022ರನ್ವಯ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ದಿನಾಂಕ 07-08-2017 ಪೂರ್ವದಲ್ಲಿ ನೇಮಕಾತಿ ಹೊಂದಿ ಪ್ರಸ್ತುತ ನೇರಪಾವತಿಯಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಮಾತ್ರ ನೇರ ನೇಮಕಾತಿ ಅನ್ವಯಿಸುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ (ರಾಜ್ಯದ ಪಾಲಿಕೆಗಳ ಪೌರಕಾರ್ಮಿಕರ ನೇಮಕಾತಿ) (ವಿಶೇಷ) ನಿಯಮಗಳು-2022ರಡಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: ಭರ್ತಿಮಾಡಬೇಕಾದ ಹುದ್ದೆಗಳ ಸಂಖ್ಯೆ 15. ಪೌರ ಕಾರ್ಮಿಕರು (ವೇತನ ಶ್ರೇಣಿ ರೂ. 27,000- 46,675).

* ಕನ್ನಡ ಮಾತನಾಡಲು ಗೊತ್ತಿರಬೇಕು.

* ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿ ಪೌರ ಕಾರ್ಮಿಕರು, ನೇರ ಪಾವತಿ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರ ಗುತ್ತಿಗೆ ಆಧಾರದ ಮೇಲೆ ಕನಿಷ್ಟ 2 ವರ್ಷಗಳಿಗಿಂತ ಕಡಿಮೆಯಿಲ್ಲದ ಸೇವೆಯನ್ನು ಸಲ್ಲಿಸಿರುವ ಮತ್ತು ದಾವಣಗೆರೆ ಮಹಾನಗರ ಪಾಲಿಕೆಗಳಲ್ಲಿ ದಿನಾಂಕ 07-08-2017 ಪೂರ್ವದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿ ಅಥವಾ ವ್ಯಕ್ತಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

* ಕರ್ನಾಟಕ ರಾಜ್ಯ ಪತ್ರ ಅಧಿಸೂಚನೆಯಂತೆ ಅಧಿಸೂಚನೆ ಜಾರಿಗೆ ಬಂದ ದಿನಾಂಕಕ್ಕೆ ಗರಿಷ್ಠ ವಯೋಮಿತಿ 55 ವರ್ಷಗಳನ್ನು ಮೀರತಕ್ಕದ್ದಲ್ಲ.

ಅರ್ಜಿಗಳನ್ನು 18/2/2026 ರಿಂದ 17/3/2026ರ ತನಕ ಸಲ್ಲಿಕೆ ಮಾಡಬೇಕಿದೆ. ಅರ್ಜಿ ಸಲ್ಲಿಕೆಗೆ ವಿಳಾಸ ದಾವಣಗೆರೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ರೈಲ್ವೆ ನಿಲ್ದಾಣ ಎದುರು, ಪಿಬಿ ರಸ್ತೆ, ದಾವಣಗೆರೆ.

ಅಧಿಸೂಚನೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ಈ ನೇಮಕಾತಿಯು ಸರ್ಕಾರ/ ಪೌರಾಡಳಿತ ನಿರ್ದೇಶನಾಲಯದಿಂದ ಕಾಲ ಕಾಲಕ್ಕೆ ಹೊರಡಿಸಲಾಗುವ ಆದೇಶ/ ಸುತ್ತೋಲೆ/ ಅಧಿಸೂಚನೆ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular