HomeKarnatakaBREAKING NEWS: ಕಾರು ಡ್ರೈವ್ ಮಾಡುತ್ತಿದ್ದಾಗಲೇ ಹೃದಯಾಘಾತ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಆಪ್ತ ಗುತ್ತಿಗೆದಾರ ಸಾವು

BREAKING NEWS: ಕಾರು ಡ್ರೈವ್ ಮಾಡುತ್ತಿದ್ದಾಗಲೇ ಹೃದಯಾಘಾತ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಆಪ್ತ ಗುತ್ತಿಗೆದಾರ ಸಾವು

ದಾವಣಗೆರೆ: ಕಾರು ಡ್ರೈವ್ ಮಾಡುವಾಗಲೇ ಹೃದಯಾಘಾತ ಸಂಭವಿಸಿ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಆಪ್ತ ಗುತ್ತಿಗೆದಾರರೊಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

42 ವರ್ಷದ ಸುರೇಶ್ ಪೈ ಮೃತ ಗುತ್ತಿಗೆದಾರ. ಕಾರು ಚಲಾಯಿಸುತ್ತಿದ್ದಾಗಲೇ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಪಕ್ಕದ ಗೋಡೆಗೆ ಗುದ್ದಿದೆ. ಹೃದಾಯಾಘಾತದಿಂದ ಸುರೇಶ್ ಪೈ ಸಾವನ್ನಪ್ಪಿದ್ದಾರೆ.

ದಾವಣಗೆರೆ ನಗರದ ಈಶ್ವರ ಧ್ಯಾನ ಮಂದಿರದ ಬಳಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular