‘SSLC’ ಪರೀಕ್ಷೆ ವೇಳೆ ಕರ್ತವ್ಯಲೋಪ ಎಸಗಿದ ಮೇಲ್ವಿಚಾರಕ ಅಮಾನತು.!

ದಾವಣಗೆರೆ : ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿದ್ದು ಹರಿಹರ ತಾಲ್ಲೂಕಿನ ಎಂಕೆಇಟಿಎಲ್ ಕೆ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಪರೀಕ್ಷಾ ಕರ್ತವ್ಯದಲ್ಲಿ ನಿರ್ಲ್ಯಕ್ಷತೆ ವಹಿಸಿದ ಕಾರಣಕ್ಕೆ ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಆದೇಶಿಸಿದ್ದಾರೆ.

ಬುಧವಾರ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆದಿರುತ್ತದೆ. ಇವರು ಪರೀಕ್ಷಾ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಿದ ಕೊಠಡಿಯಲ್ಲಿ ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ಹಿಂದೆ, ಮುಂದಿನ ಬೆಂಚ್ ನ ವಿದ್ಯಾರ್ಥಿಗಳೊಂದಿಗೆ ಸಂಭಾಷಣೆಯಲ್ಲಿ ತೊಡಗಿದ್ದರೂ ಮೇಲ್ವಿಚಾರಕರಾಗಿ ಪರೀಕ್ಷಾ ಶಿಸ್ತು, ಗೋಪ್ಯತೆಯನ್ನು ಕಾಪಾಡಿಕೊಳ್ಳುವಲ್ಲಿ ವಿಫಲವಾಗಿರುವುದರಿಂದ ಅಮಾನತು ಮಾಡಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದ್ದು ನೇರ ದೃಶ್ಯಾವಳಿಗಳನ್ನು ಶಿಕ್ಷಣ ಇಲಾಖೆ ಆಯುಕ್ತರು ವೀಕ್ಷಣೆ ಮಾಡಿರುತ್ತಾರೆ. ಆಯುಕ್ತರು ನೀಡಿದ ನಿರ್ದೇಶನದ ಮೇರೆಗೆ ಹರಿಹರ ತಾ. ಬನ್ನಿಕೋಡು ಕರ್ನಾಟಕ ಪಬ್ಲಿಕ್ ಸ್ಕೂಲ್ ಚಿತ್ರಕಲಾ ಶಿಕ್ಷಕರಾದ ರಿಯಾಜ್ ಅಹಮದ್ ಇವರನ್ನು ಅಮಾನತು ಮಾಡಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read