HomeKarnatakaದಾವಣಗೆರೆ ದುರ್ಗಾಂಬಿಕಾ ದೇವಿ ಜಾತ್ರೆ: ಪ್ರಾಣಿ ಬಲಿ ನಿಷೇಧ ನಿಯಮ ಉಲ್ಲಂಘಿಸಿದರೆ ದಂಡ, 6 ತಿಂಗಳು...

ದಾವಣಗೆರೆ ದುರ್ಗಾಂಬಿಕಾ ದೇವಿ ಜಾತ್ರೆ: ಪ್ರಾಣಿ ಬಲಿ ನಿಷೇಧ ನಿಯಮ ಉಲ್ಲಂಘಿಸಿದರೆ ದಂಡ, 6 ತಿಂಗಳು ಸೆರೆವಾಸ

ದಾವಣಗೆರೆ: ದಾವಣಗೆರೆಯಲ್ಲಿ ಮಾರ್ಚ್ 17 ರಿಂದ 24 ರವರೆಗೆ ಶ್ರೀದುರ್ಗಾಂಬಿಕಾ ದೇವಿ ಜಾತ್ರೆ ನಡೆಯಲಿದೆ. ಕರ್ನಾಟಕ ಪ್ರಾಣಿಬಲಿ ತಡೆ ಕಾಯ್ದೆ 1959 ರ ಮತ್ತು ನಿಯಮ 1963 ರ ಪ್ರಕಾರ ಜಾತ್ರಾ ಅವಧಿಯಲ್ಲಿ ಸಾರ್ವಜನಿಕ ದೇವಸ್ಥಾನ ಸ್ಥಳ, ಪೂಜಾ ಸ್ಥಳ ಹಾಗೂ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಪಾಣಿ ಬಲಿ ಸಂಪೂರ್ಣ ನಿಷೇಧಿಸಲಾಗಿದೆ.

ನಿಯಮ ಉಲ್ಲಂಘಿಸಿದರೆ ಕಲಂ(6) ರನ್ವಯ ದಂಡ ಮತ್ತು ಆರು ತಿಂಗಳು ಸೆರವಾಸ, ಕಲಂ (7)ರ ನಿಯಮದನ್ವಯ ಉಲ್ಲಂಘಿಸಿ ಯಾವುದೇ ವ್ಯಕ್ತಿಯನ್ನು ವಾರೆಂಟ್ ಇಲ್ಲದೆ ಪೊಲೀಸ್ ಇನ್ ಸ್ಪೆಕ್ಟರ್ ರವರು ದಸ್ತಗಿರಿ ಮಾಡಲು ಅಧಿಕಾರವಿದೆ. ಜಾತ್ರೆಯಲ್ಲಿ ಪ್ರಾಣಿಬಲಿ ಕೊಡುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಈ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular