BREAKING: ಅಮೆರಿಕಾದಲ್ಲಿ ದಾವಣಗೆರೆ ಮೂಲದ ದಂಪತಿ ಹಾಗೂ ಮಗು ನಿಗೂಢ ಸಾವು…!

ದಾವಣಗೆರೆ: ಅಮೆರಿಕಾದಲ್ಲಿ ವಾಸವಾಗಿದ್ದ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ಅನುಮನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾವಣಗೆರೆ ಮೂಲದ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ದಂಪತಿ ಹಾಗೂ ಮಗು ಅಮೆರಿಕಾದ ಮೇರಿಲ್ಯಾಂಡ್ ನ ಬಾಲ್ಟಿಮೋರ್ ನಲ್ಲಿ ವಾಸವಾಗಿದ್ದರು. ಇದೀಗ ನಿಗೂಢವಾಗಿ ಮೂವರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಯೋಗೇಶ್ ಹೊನ್ನಾಳ (37), ಪ್ರತಿಭಾ (35) ಹಾಗೂ ಯಶ್ (6) ಮೃತರು.

ಕಳೆದ 9 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಾಗಿದ್ದ ಯೋಗೇಶ್ ಹಾಗೂ ಪತ್ನಿ ಪ್ರತಿಭಾ ಇಬ್ಬರೂ ಇಂಜಿನಿಯರ್ ವೃತ್ತಿಯಲ್ಲಿದ್ದರು. ಕೊನೇ ಬಾರಿಗೆ ಎರಡು ದಿನಗಳ ಹಿಂದೆ ದಾವಣಗೆರೆಯಲ್ಲಿದ್ದ ತಾಯಿ ಶೋಭಾ ಅವರೊಂದಿಗೆ ಯೋಗೇಶ್ ಮಾತನಾಡಿದ್ದರು. ಇದೀಗ ಯೋಗೇಶ್, ಪತ್ನಿ ಪ್ರತಿಭಾ ಹಾಗೂ 6 ವರ್ಷದ ಮಗು ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ತಿಳಿದು ಕುಟುಂಬ ಆಘಾತಕ್ಕೊಳಗಾಗಿದೆ.

ಮೂವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳಿದ್ದು, ತನಿಖೆಯಿಂದಷ್ಟೇ ತಿಳಿಯಬೇಕಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read