BIG NEWS: ಅಮೆರಿಕಾದಲ್ಲಿ ದಾವಣಗೆರೆಯ ದಂಪತಿ-ಮಗು ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್…!

ದಾವಣಗೆರೆ: ದಾವಣಗೆರೆ ಮೂಲದ ದಂಪತಿ ಹಾಗೂ ಮಗು ಅಮೇರಿಕಾದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕಿಂಗ್ ಮಾಹಿತಿ ಹೊರಬಿದ್ದಿದೆ.

ವ್ಯಕ್ತಿಯೇ ತನ್ನ ಹೆಂಡತಿ ಮಗಳಿಗೆ ಗುಂಡಿಟ್ಟು ಕೊಲೆ ಮಾಡಿದ್ದು ಬಳಿಕ ತಾನೂ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ದಾವಣಗೆರೆ ಮೂಲದ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ದಂಪತಿ ಹಾಗೂ ಮಗು ಅಮೆರಿಕಾದ ಮೇರಿಲ್ಯಾಂಡ್ ನ ಬಾಲ್ಟಿಮೋರ್ ನಲ್ಲಿ ವಾಸವಾಗಿದ್ದರು. ಇದೀಗ ನಿಗೂಢವಾಗಿ ಮೂವರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಯೋಗೇಶ್ ಹೊನ್ನಾಳ (37), ಪ್ರತಿಭಾ (35) ಹಾಗೂ ಯಶ್ (6) ಮೃತರು.

ಕಳೆದ 9 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಾಗಿದ್ದ ಯೋಗೇಶ್ ಹಾಗೂ ಪತ್ನಿ ಪ್ರತಿಭಾ ಇಬ್ಬರೂ ಇಂಜಿನಿಯರ್ ವೃತ್ತಿಯಲ್ಲಿದ್ದರು. ಬಾಲ್ಟಿಮೋರ್ ನಲ್ಲಿ ಮನೆಯನ್ನು ಖರೀದಿಸಿ 6 ವರ್ಷದ ಮಗನೊಂದಿಗೆ ವಾಸವಾಗಿದ್ದರು. ಆದರೆ ದಂಪತಿ ಹಾಗೂ ಮಗು ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೆಲ ಮಾಹಿತಿ ಪ್ರಕಾರ ಯೋಗೇಶ್ ತನ್ನ ಪತ್ನಿ ಹಾಗೂ ಮಗನಿಗೆ ಗುಂಡಿಟ್ಟು ಹತ್ಯೆ ಮಾಡಿ ಬಳಿಕ ತಾನೂ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಯೋಗೇಶ್ ಇಂತಹ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ. ಮೂವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳಿವೆ.

ದಾವಣಗೆರೆಯಲ್ಲಿರುವ ಯೋಗೇಶ್ ಕುಟುಂಬ, ಅಮೇರಿಕಾದಲ್ಲಿ ದಂಪತಿ, ಮಗುವಿನ ಸಾವಿನ ನಿಖರ ಕಾರಣ ತಿಳಿಸಿ, ಮೃತದೇಹವನ್ನು ದವಣಗೆರೆಗೆ ಕರೆತರುವ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read