BREAKING: ದಾವಣಗೆರೆಯಲ್ಲಿ ಭೀಕರ ಬೆಂಕಿ ಅವಘಡ: ಕಟ್ಟಡದೊಳಗೆ ಸಿಲುಕಿದ್ದ ತಾಯಿ-ಮಗಳ ರಕ್ಷಣೆ

ದಾವಣಗೆರೆ: ದಾವಣಗೆರೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದ ಒಳಗೆ ಸಿಲುಕಿದ್ದ ತಾಯಿ ಹಾಗೂ ಮಗಳನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿರುವ ಘಟನೆ ನಡೆದಿದೆ.

ದಾವಣಗೆರೆಯ ಅರುಣಾ ಸರ್ಕಲ್ ಬಳಿ ಇರುವ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಕಟ್ಟಡದ ತುಂಬಾ ಬೆಂಕಿ ಆವರಿಸಿದೆ. ತಾಯಿ ಹಾಗೂ ಮಗಳು ಕಟ್ಟಡದಿಂದ ಹೊರಬರಲಾಗದೇ ಪರದಾಡುತ್ತಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸೊದ ಅಗ್ನಿಶಾಮಕ ಸಿಬ್ಬಂದಿಗಳು ಕಟ್ಟಡಕ್ಕೆ ಏಟಿ ಹಾಕಿ, ಏಟಿ ಮೂಲಕವಾಗಿ ತಾಯಿ-ಮಗಳನ್ನು ರಕ್ಷಿಸಿ ಕರೆತಂದಿದ್ದಾರೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read