HomeKarnatakaBIG NEWS: ದಾವಣಗೆರೆಯಲ್ಲಿ ಕಲ್ಲು ತೂರಾಟ ಪ್ರಕರಣ: 11 ಆರೋಪಿಗಳಿಗೆ ನ್ಯಾಯಾಂಗ ಬಂಧನ

BIG NEWS: ದಾವಣಗೆರೆಯಲ್ಲಿ ಕಲ್ಲು ತೂರಾಟ ಪ್ರಕರಣ: 11 ಆರೋಪಿಗಳಿಗೆ ನ್ಯಾಯಾಂಗ ಬಂಧನ

ದಾವಣಗೆರೆ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣದ ಬಳಿಕ ದಾವಣಗೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆಯೂ ಗಲಾಟೆ ನಡೆದಿದ್ದು, 11 ಆರೋಪಿಗಳನ್ನು ಬಂಧಿಸಲಾಗಿದೆ.

ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಿನ್ನೆ ಸಂಜೆ ದಾವಣಗೆರೆಯ ಬೇತೂರು ರಸ್ತೆಯಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಪೊಲೀಸರು 11 ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಇಂದು ಬಂಧಿತ ಆರೋಪಿಗಳನ್ನು ಜಡ್ಜ್ ಮುಂದೆ ಹಾಜರು ಪಡಿಸಲಾಗಿದ್ದು, ಈ ವೇಳೆ ನ್ಯಾಯಾಧೀಶರು ಬಂಧಿತ ಎಲ್ಲಾ 11 ಆರೋಪಿಗಳಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular