HomeKarnatakaBREAKING NEWS: ಠಾಣೆ ಆವರಣದಲ್ಲಿಯೇ ಲಂಚಕ್ಕೆ ಕೈಯೊಡ್ಡಿದ್ದ ಹಿರಿಯ ಪೊಲೀಸ್ ಪೇದೆ; ಲೋಕಾಯುಕ್ತ ಬಲೆಗೆ ಬಿದ್ದ...

BREAKING NEWS: ಠಾಣೆ ಆವರಣದಲ್ಲಿಯೇ ಲಂಚಕ್ಕೆ ಕೈಯೊಡ್ಡಿದ್ದ ಹಿರಿಯ ಪೊಲೀಸ್ ಪೇದೆ; ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ಟೇಬಲ್

ದಾವಣಗೆರೆ: ಲಂಚಕ್ಕೆ ಕೈಯೊಡ್ಡಿದಾಗಲೇ ಹೆಡ್ ಕಾನ್ಸ್ಟೇಬಲ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ ತಾಲೂಕಿನ ಮಾಯಕೊಂಡ ಠಾಣೆಯ ಹೆಡ್ ಕಾನ್ಸ್ಟೇಬಲ್ ಹೊನ್ನೂರಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದವರು. 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಜಪ್ತಿ ಮಾಡಿದ್ದ ಬೈಕ್ ಹಿಂದಿರುಗಿಸಲು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪೊಲೀಸ್ ಠಾಣೆಯ ಆವರಣದಲ್ಲಿಯೇ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಎಂ.ಎಸ್.ಕೌಲಾಪುರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹೆಡ್ ಕಾನ್ಸ್ಟೇಬಲ್ ಸಿಕ್ಕಿ ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular