ದಾವಣಗೆರೆ: ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು, ಆಪರೇಷನ್ ಥಿಯೇಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಆಕ್ಸಿಜನ್ ಸಿಲಿಂಡರ್ ಸ್ಫೊಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬೆಂಕಿ ಅವಘಡದಲ್ಲಿ ಆಪರೇಷನ್ ಥಿಯೇಟರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಬೆಂಕಿ ಅವಘಡ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

