ದಾವಣಗೆರೆ: ಕೋರ್ಟ್ ಆವರಣದಲ್ಲಿಯೇ ಪತಿ ಮಹಾಶಯ ಪತ್ನಿಗೆ ಚಾಕುವಿನಿಂದ ಇರಿದಿರುವ ಘಟನೆ ದಾವಣಗೆರೆಯ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಪತಿ-ಪತ್ನಿ ನಡುವಿನ ಕಲಹ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಮುಗಿಸಿ ಹೊರ ಬರುತ್ತಿದ್ದಂತೆಯೇ ಪತಿ ಮಹಾಶಯ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ತಾನೂ ಕೈ ಕುಯ್ದುಕೊಂಡಿದ್ದಾನೆ. ಪ್ರವೀಣ್ ಪತ್ನಿಗೆ ಚಾಕು ಇರಿದ ಪತಿ. ಪವಿತ್ರಾ ಹಲ್ಲೆಗೊಳಗಾಗಿರುವ ಪತ್ನಿ.
ಇಬ್ಬರನ್ನೂ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆಲ ವರ್ಷಗಳ ಹಿಂದೆ ಪ್ರವೀಣ್ ಹಾಗೂ ಪವಿತ್ರಾ ಪ್ರೀತಿಸಿ ವಿವಾಹವಾಗಿದ್ದರು. ಕೌಟುಂಬಿಕ ಕಲಹದಿಂದ ಬೇಸತ್ತ ಪತ್ನಿ ನ್ಯಾಯಾಲಯದ ಮೊರೆ ಹೋಗಿದ್ದಳು. ಇಂದು ವಿಚಾರಣೆಗೆ ಬಂದಿದ್ದ ವೇಳೆ ಕೋರ್ಟ್ ಆವರಣದಲ್ಲೇ ಪತಿ, ಪತ್ನಿಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾನೆ.