HomeKarnatakaBIG NEWS: ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಬಿಜೆಪಿ ಶಾಸಕ!

BIG NEWS: ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಬಿಜೆಪಿ ಶಾಸಕ!

ದಾವಣಗೆರೆ: ಬಿಜೆಪಿ ಶಾಸಕ ಬಿ.ಪಿ.ಹರೀಶ್ ನಗರಸಭೆ ಆಯುಕ್ತರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ.

ಹರಿಹರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಶಾಖಾ ಕಚೇರಿ ಉದ್ಘಾಟನಾ ಸಮಾರಂಭದ ವೇಳೆ ಕೋಪದ ಬರದಲ್ಲಿ ಶಾಸಕ ಬಿಪಿ ಹರೀಶ್, ನಗರಸಭೆ ಆಯುಕ್ತ ಸುಬ್ರಹ್ಮಣ್ಯ ಶೆಟ್ಟಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಶಾಖಾ ಕಚೇರಿ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯಲ್ಲಿ ಶಾಸಕರ ಹೆಸರು ಹಾಕದಿರುವ ವಿಚಾರವಾಗಿ ಕೆಂಡಾಮಂಡಲರಾದ ಶಾಸಕರು, ನಗರಸಭೆ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಿನ್ನ ಮುಖ ತೋರಿಸದೇ ಹೋಗು ಆಕಡೆ ಎಂದು ಬೈದಿದ್ದಾರೆ. ಇದೇ ವೇಳೆ ಶಾಸಕರು ಆಯುಕ್ತರ ಮೇಲೆ ಕೈಮಾಡಲು ಮುಂದಾಗಿದ್ದಾರೆ. ಅಲ್ಲಿಯೇ ಇದ್ದ ಇನ್ನೋರ್ವ ಅಧಿಕಾರಿ ತಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾಗದೇ ಶಾಸಕರು ಸ್ಥಳದಿಂದ ತೆರಳಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular