BREAKING : ದಾವಣಗೆರೆ ‘PSI’ ನಾಗರಾಜಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!

ದಾವಣಗೆರೆ : ದಾವಣಗೆರೆ PSI ನಾಗರಾಜಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಲ್ಲಿ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ.

ತುಮಕೂರಿನಲ್ಲಿ ದಾವಣಗೆರೆ ಪಿಎಸ್ ಐ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದರು. ತುಮಕೂರಿಗೆ ಬರುವ ಮುನ್ನ ಮನೆಯಲ್ಲಿ ಪಿಎಸ್ ಐ ಜಗಳವಾಡಿದ್ದರು ಎನ್ನಲಾಗಿದೆ. ಇಂಜಿನಿಯರಿಂಗ್ ಓದಿದ್ದ ಮಗ ಮನೆಯಲ್ಲಿ ಇದ್ದಿದ್ದಕ್ಕೆ ನಾಗರಾಜಪ್ಪ ತೀವ್ರ ಬೇಸರಗೊಂಡಿದ್ದರು. ಈ ವಿಚಾರಕ್ಕೆ ಮನನೊಂದು ನಾಗರಾಜಪ್ಪ ತುಮಕೂರಿನ ಲಾಡ್ಜ್ ಒಂದರಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಗನ ವಿಚಾರಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಮಗನಿಗೆ ಕೆಲಸ ಸಿಗಲಿ ಎಂಬ ಉದ್ದೇಶಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪಿಎಸ್ ಐ ನಾಗರಾಜ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ಈ ಪ್ರಕರಣವನ್ನ ದಾವಣಗೆರೆಯ ಠಾಣೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ದಾವಣಗೆರೆ ನಗರದ ಬಡಾವಣೆ ಠಾಣೆಯ ಪಿಎಸ್ ಐ ನಾಗರಾಜಪ್ಪ ತುಮಕೂರಿನ ದ್ವಾರಕ ಲಾಡ್ಜ್ ನ ರೂಮಿನಲ್ಲಿ ನೇಣಿಗೆ ಶರಣಾಗಿದ್ದರು. ಜುಲೈ 1ರಂದು ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿದ್ದ ಪಿಎಸ್ ಐ ನಾಗರಾಜ್, ಬಳಿಕ ರೂಮಿನಿಂದ ಹೊರಬಂದಿರಲಿಲ್ಲ. ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗಲೇ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read