HomeLatest NewsBREAKING: ರಾಟ್ ವೀಲರ್ ನಾಯಿ ದಾಳಿಗೆ ಮಹಿಳೆ ಬಲಿ

BREAKING: ರಾಟ್ ವೀಲರ್ ನಾಯಿ ದಾಳಿಗೆ ಮಹಿಳೆ ಬಲಿ

ದಾವಣಗೆರೆ: ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 38 ವರ್ಷದ ಅನಿತಾ ಮೃತ ಮಹಿಳೆ. ತಡರಾತ್ರಿ ಜಮೀನಿನಲ್ಲಿ ಮಾಲೀಕ ರಾಟ್ ವೀಲರ್ ನಾಯಿಗಳನ್ನು ಬಿಟ್ಟಿದ್ದರು. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ರಾಟ್ ವೀಲರ್ ನಾಯಿಗಳು ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅನಿತಾ ಕೊನೆಯುಸಿರೆಳೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular