BIG NEWS: ಸ್ಟೇಟ್ ಬ್ಯಾಂಕ್ ಗೆ ನುಗ್ಗಿ ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು

ದಾವಣಗೆರೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ನುಗ್ಗಿದ ಕಳ್ಳರ ಗುಂಪು ಬ್ಯಾಂಕ್ ನಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ಮುಖ್ಯರಸ್ತೆಯಲ್ಲಿ ನಡೆದಿದೆ.

ಬ್ಯಾಂಕ್ ನ ಕಿಟಕಿ ಮುರಿದು ಕಳ್ಳರ ಗ್ಯಾಂಗ್ ಒಳನುಗ್ಗಿದೆ. ಲಾಕರ್ ನಲ್ಲಿದ್ದ ಹಣ, ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.

ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ಕಳುವಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಶ್ವಾನದಳ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read