HomeKarnatakaBIG NEWS: ಸ್ಟೇಟ್ ಬ್ಯಾಂಕ್ ಗೆ ನುಗ್ಗಿ ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ದೋಚಿ ಪರಾರಿಯಾದ...

BIG NEWS: ಸ್ಟೇಟ್ ಬ್ಯಾಂಕ್ ಗೆ ನುಗ್ಗಿ ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು

ದಾವಣಗೆರೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ನುಗ್ಗಿದ ಕಳ್ಳರ ಗುಂಪು ಬ್ಯಾಂಕ್ ನಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ಮುಖ್ಯರಸ್ತೆಯಲ್ಲಿ ನಡೆದಿದೆ.

ಬ್ಯಾಂಕ್ ನ ಕಿಟಕಿ ಮುರಿದು ಕಳ್ಳರ ಗ್ಯಾಂಗ್ ಒಳನುಗ್ಗಿದೆ. ಲಾಕರ್ ನಲ್ಲಿದ್ದ ಹಣ, ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.

ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ಕಳುವಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಶ್ವಾನದಳ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular