HomeKarnatakaದಾವಣಗೆರೆ ದಕ್ಷಿಣದಲ್ಲಿ 39, ಬಾಗಲಕೋಟೆಯಲ್ಲಿ 16 ಅಭ್ಯರ್ಥಿಗಳು

ದಾವಣಗೆರೆ ದಕ್ಷಿಣದಲ್ಲಿ 39, ಬಾಗಲಕೋಟೆಯಲ್ಲಿ 16 ಅಭ್ಯರ್ಥಿಗಳು

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 23ರ ಸೋಮವಾರ ಕೊನೆಯ ದಿನವಾಗಿತ್ತು. ಒಂದೇ ದಿನ 43 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಇಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 26 ಕೊನೆ ದಿನ.

ಸೋಮವಾರ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸಮರ್ಥ್ ಶಾಮನೂರು, ಬಿಜೆಪಿಯ ಶ್ರೀನಿವಾಸ್‌ ದಾಸಕರಿಯಪ್ಪ ಸೇರಿದಂತೆ 30 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಕೆ ಮಾಡಿದರು. ಒಟ್ಟಾರೆಯಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 39 ಅಭ್ಯರ್ಥಿಗಳು 45 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

ಬಾಗಲಕೋಟೆ ಕ್ಷೇತ್ರದಲ್ಲಿ ಸೋಮವಾರ ಬಿಜಪಿಯ ವೀರಣ್ಣ ಚರಂತಿಮಠ, ಕಾಂಗ್ರೆಸ್‌ನ ಉಮೇಶ್ ಮೇಟಿ ಸೇರಿದಂತೆ ಹಲವಾರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದರು. ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು 26 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಚುನಾವಣಾಧಿಕಾರಿಗಳು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಮಾರ್ಚ್ 26ರಂದು ಅಭ್ಯರ್ಥಿಗಳು ಬಯಸಿದರೆ ನಾಮಪತ್ರ ವಾಪಸ್ ಪಡೆಯಬಹುದು. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಚುನಾವಣಾ ಫಲಿಶಾಂಶ ಮೇ 4ರಂದು ಪ್ರಕಟವಾಗಲಿದೆ.

ಮುಖ್ಯಮಂತ್ರಿ, ಡಿಸಿಎಂ ಆಗಮನ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್ ಶಾಮನೂರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತಂದೆ ಎಸ್.ಎಸ್.ಮಲ್ಲಿಕಾರ್ಜುನ್ ಜೊತೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, “ರಾಜ್ಯದಲ್ಲಿ ಈಗ ಎರಡು ಉಪಚುನಾವಣೆಗಳು ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ನಡೆಯುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಶ್ಯಾಮನೂರು ಶಿವಶಂಕರಪ್ಪ ಹಾಗೂ ಹೆಚ್ ವೈ ಮೇಟಿಯವರು ಗೆದ್ದಿದ್ದರು. ಇವರಿಬ್ಬರೂ ಅಕಾಲಿಕವಾಗಿ ಮರಣ ಹೊಂದಿದ್ದು, ಉಪಚುನಾವಣೆ ನಡೆಯುತ್ತಿದೆ” ಎಂದರು.

“ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು 6 ಬಾರಿ ಶಾಸಕರಾಗಿದ್ದು, ಅವರ ಮಗ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರವರು 2 ಬಾರಿ ಶಾಸಕರಾಗಿ ಜನರಿಂದ ಆಯ್ಕೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಲವಾಗಿದೆ. ಶಾಮನೂರು ಶಿವಶಂಕರಪ್ಪ ನವರು ಮಂತ್ರಿ, ಸಂಸದರಾಗಿ, ಶಾಸಕರಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಜನಮನದಲ್ಲಿ ನೆಲೆಸಿದ್ದಾರೆ” ಎಂದು ಹೇಳಿದರು.

ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರು ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸಾದಿಕ್ ಪೈಲ್ವಾನ್ ನಾಮಪತ್ರ ಸಲ್ಲಿಸಿದ್ದಾರೆ. ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು. ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಅವರು ಹೇಳಿದ್ದು, ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ.

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದಲ್ಲಿ ಸೋಮವಾರ 13 ಅಭ್ಯರ್ಥಿಗಳು 19 ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ, ಬಿ.ಶ್ರೀರಾಮುಲು ಜೊತೆ ಬಂದು ಪಕ್ಷದ ಅಭ್ಯರ್ಥಿ ವೀರಣ್ಣ ಚಿರಂತಿಮಠ ನಾಮಪತ್ರ ಸಲ್ಲಿಕೆ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಬಂದು ನಾಮಪತ್ರ ಸಲ್ಲಿಕೆ ಮಾಡಿದರು. ಬಾಗಲಕೋಟೆಯಲ್ಲಿ 16 ಅಭ್ಯರ್ಥಿಗಳು 19 ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ಇಲ್ಲ. “ಉಮೇಶ್ ಮೇಟಿಯವರು ಇಂದು ನಾಮಪತ್ರವನ್ನು ಸಲ್ಲಿಸಿದ್ದು, ಅವರನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇವೆ. ಅವರನ್ನು ಆಶೀರ್ವಾದಿಸುವುದು ನಿಮ್ಮ ಜವಾಬ್ದಾರಿ. ಬಿಜೆಪಿ ಒಡ್ಡುವ ಆಸೆ, ಆಮಿಷಗಳಿಗೆ ಒಳಗಾಗಬೇಡಿ. ಉಮೇಶ್ ಮೇಟಿಯವರನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಿ. ಕ್ಷೇತ್ರದಲ್ಲಿ ನಾಲ್ಕೈದು ದಿನ ಇದ್ದು ಹಳ್ಳಿ ಹಳ್ಳಿಗೂ ಭೇಟಿ ನೀಡಿ ಪ್ರಚಾರ ಮಾಡುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular