HomeJobsಏ.9ಕ್ಕೆ ಉಪ ಚುನಾವಣೆ: NWKRTC ಪರೀಕ್ಷೆ ಮುಂದೂಡಿಕೆ, ಹೊಸ ವೇಳಾಪಟ್ಟಿ

ಏ.9ಕ್ಕೆ ಉಪ ಚುನಾವಣೆ: NWKRTC ಪರೀಕ್ಷೆ ಮುಂದೂಡಿಕೆ, ಹೊಸ ವೇಳಾಪಟ್ಟಿ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದ್ದ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದ್ದು, ಹೊಸ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ.

ಈ ಕುರಿತು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ ವಿವಿಧ ವೃಂದಗಳ ದರ್ಜೆ-2 ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಸಂಬಂಧ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ಎಂದು ಹೇಳಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 19.11.2025 ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವೃಂದಗಳ ದರ್ಜೆ-2 ಅಧಿಕಾರಿ ಹುದ್ದೆಗಳಿಗೆ (ಆಂತರಿಕ ನೇಮಕಾತಿ ಮತ್ತು ನೇರ ನೇಮಕಾತಿ ಹುದ್ದೆಗಳಿಗೆ) ಅರ್ಜಿಗಳನ್ನು ಆಹ್ವಾನಿಸಿ, ಹುದ್ದೆಗಳಿಗೆ ಸಂಬಂಧಿಸಿದಂತೆ ಪಠ್ಯಕ್ರಮವನ್ನು ಸಹ ಪ್ರಕಟಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ದರ್ಜೆ-2 ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 09.04.2026 ರಂದು ನಡೆಸಲು ದಿನಾಂಕ 07.03.2026ರ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ಆದರೆ ದಿನಾಂಕ 09.04.2026 ರಂದು ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾದ ಕಾರಣ ಸದರಿ ದಿನಾಂಕದಂದು ನಿಗದಿಯಾದ ಪರೀಕ್ಷೆಯನ್ನು ದಿನಾಂಕ 10.04.2026ರಂದು ನಡೆಸಲಾಗುವುದು.

ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ

  • ಪರೀಕ್ಷಾ ಕೇಂದ್ರದಲ್ಲಿ Frisking ಮತ್ತು ಮುಖಚಹರೆ ಪರಿಶೀಲಿಸಿ ಪ್ರವೇಶ ನೀಡುವುದರಿಂದ 2 ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದೊಳಗೆ ಹಾಜರಿರತಕ್ಕದ್ದು.
  • ಋಣಾತ್ಮಕ ಮೌಲ್ಯಮಾಪನವಿದ್ದು, ಪ್ರತಿ ತಪ್ಪು ಉತ್ತರಕ್ಕೆ 1/4 ರಷ್ಟು (0.75) ಅಂಕಗಳನ್ನು ಕಡಿತಗೊಳಿಸಲಾಗುವುದು.
  • ಉತ್ತರಿಸದೇ ಇರುವ ಪ್ರಶ್ನೆಗಳಿಗೆ ಐದನೇ ಆಯ್ಕೆ/ ವೃತ್ತವನ್ನು ಶೇಡ್ ಮಾಡಲು ಕೊನೆಯ ಬೆಲ್ ಆದ ನಂತರ ಹೆಚ್ಚುವರಿಯಾಗಿ ಐದು ನಿಮಿಷಗಳನ್ನು ನೀಡಲಾಗುವುದು.
  • ಯಾವುದೇ ಆಯ್ಕೆಯನ್ನು/ ವೃತ್ತವನ್ನು ಶೇಡ್ ಮಾಡಿಲ್ಲದಿದ್ದರೆ, ಪ್ರಶ್ನೆಗೆ 1/4 ರಷ್ಟು (0.75) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

ಸಾಮಾಜಿಕ ಜಾಲತಾಣದಲ್ಲಿಯೂ ಕೆಇಎ ಪೋಸ್ಟ್ ಹಾಕಿದ್ದು, ವಿಧಾನಸಭೆಯ 2 ಕ್ಷೇತ್ರಗಳಿಗೆ ಏ.9ರಂದು ಉಪ ಚುನಾವಣೆ ಘೋಷಣೆಯಾಗಿರುವ ಕಾರಣ ಅಂದು ನಡೆಸಬೇಕಾಗಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಏ.10ರಂದು ನಡೆಸಲು ಕೆಇಎ ತೀರ್ಮಾನಿಸಿದೆ.

ಒಟ್ಟು‌ 33 ಹುದ್ದೆಗಳಿಗೆ ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಅಂದು ಲಿಖಿತ ಪರೀಕ್ಷೆ ನಡೆಯಲಿದೆ. ಸದ್ಯದಲ್ಲೇ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದು, ಅಭ್ಯರ್ಥಿಗಳು ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಪರೀಕ್ಷೆಗೆ ಹಾಜರಾಗಬೇಕು.

ಒಟ್ಟು 2,500 ಮಂದಿ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದಾರೆ ಎಂದು ಹೆಚ್.ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular