HomeKarnatakaದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿ 5 ಕೋಟಿ ರೂ. ಒಡೆಯ

ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿ 5 ಕೋಟಿ ರೂ. ಒಡೆಯ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾದ ಉಪಾಧ್ಯಕ್ಷ ಶ್ರೀನಿವಾಸ್‌ ದಾಸಕರಿಯಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಶುಕ್ರವಾರ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 23ರ ಸೋಮವಾರ ಪುನಃ ಬಿಜೆಪಿ ನಾಯಕರ ಜೊತೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ದಾವಣಗೆರೆ ಬಿಜೆಪಿಯಲ್ಲಿ ಬಣ ರಾಜಕೀಯವಿದೆ ಎಂಬ ಆರೋಪಗಳ ನಡುವೆಯೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರೋಧಿ ಬಣಕ್ಕೆ ಟಿಕೆಟ್ ನೀಡಲಾಗಿದೆ. ಆದ್ದರಿಂದ ಉಪ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವರೇ? ಎಂಬುದು ಪ್ರಶ್ನೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ತಿ ವಿವರ: ಶ್ರೀನಿವಾಸ್‌ ದಾಸಕರಿಯಪ್ಪ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುವಾಗ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಆಸ್ತಿ ವಿವರದ ಕುರಿತು ಉಲ್ಲೇಖಿಸಿದ್ದಾರೆ. ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ 5.75 ಕೋಟಿ ರೂ. ಒಡೆಯ, ಸಾಲ 2.96 ಲಕ್ಷ ರೂ. ಇದೆ.

  • ಒಟ್ಟು ಆಸ್ತಿ 5.75 ಕೋಟಿ ರೂ.
  • ನಗದು 3.60 ಲಕ್ಷ ರೂ.
  • ಒಟ್ಟು ಚರಾಸ್ತಿ 34.79 ಲಕ್ಷ ರೂ.
  • ಸ್ಥಿರಾಸ್ತಿ 5.41 ಕೋಟಿ ರೂ.
  • ವಾಹನ 4 ಬೈಕ್, 1 ಕಾರು
  • ಚಿನ್ನ 120 ಗ್ರಾಂ
  • ಸಾಲ 2.96 ಲಕ್ಷ ರೂ.ಗಳು
  • ಅಪರಾಧ ಪ್ರಕರಣಗಳು ಇಲ್ಲ

ಪತ್ನಿ ಸಂಧ್ಯಾ ಎಸ್. ಆಸ್ತಿ ವಿವರ

  • ಒಟ್ಟು ಆಸ್ತಿ ಮೌಲ್ಯ 15.94 ಲಕ್ಷ
  • ನಗದು 90,000
  • ಚಿನ್ನ 120 ಗ್ರಾಂ

ತಾಯಿ ರಂಗಮ್ಮ ಆಸ್ತಿ ವಿವರ

  • ಒಟ್ಟು ಆಸ್ತಿ ಮೌಲ್ಯ 12.14 ಲಕ್ಷ
  • ನಗದು 5000
  • ಚಿನ್ನ 100 ಗ್ರಾಂ

ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮಾತನಾಡಿದ ಶ್ರೀನಿವಾಸ್‌ ದಾಸಕರಿಯಪ್ಪ, “ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಅವಕಾಶ ನೀಡಿದ ನಾಯಕರಿಗೆ ಕೃತಜ್ಞನಾಗಿದ್ದೇನೆ” ಎಂದರು.

“ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತದೆ. ಎಲ್ಲರೂ ಒಂದಾಗಿ ಕಾಂಗ್ರೆಸ್ ವಿರುದ್ಧ ಹೋರಾಡುತ್ತೇವೆ. ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ” ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular