HomeKarnatakaದಾವಣಗೆರೆ ದಕ್ಷಿಣ ಉಪ ಚುನಾವಣೆ: ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ

ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.

ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 23 ಕೊನೆಯ ದಿನವಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ಉಪ ಚುನಾವಣೆ ಎದುರಾಗಿದೆ.

ಆದರೆ ಉಪ ಚುನಾವಣೆ ಟಿಕೆಟ್ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ನೀಡಬೇಕೆ? ಅಥವ ಬೇರೆಯವರಿಗೆ ಅವಕಾಶ ಕೊಡಬೇಕೆ? ಎಂಬ ಚರ್ಚೆಗಳು ನಡೆಯುತ್ತಿವೆ. ಆದ್ದರಿಂದ ಅಭ್ಯರ್ಥಿ ಘೋಷಣೆ ಕಗ್ಗಂಟಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪ ಚುನಾವಣೆಗಾಗಿ ಸಮಿತಿ ರಚಿಸಿದ್ದಾರೆ. ಸಚಿವರು, ಶಾಸಕರು, ಎಂಎಲ್‌ಸಿಗಳನ್ನು ಒಳಗೊಂಡಿರುವ ಸಮಿತಿ ಕೆಪಿಸಿಸಿ ಕಛೇರಿಯಲ್ಲಿ ಬುಧವಾರ ಉಪ ಚುನಾವಣೆಯ ಉಸ್ತುವಾರಿ ಸಮಿತಿ ಸಭೆ ನಡೆಸಿತು.

ಸಭೆಯಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸಂತೋಷ ಲಾಡ್, ಜಮೀರ್ ಅಹ್ಮದ್ ಖಾನ್, ಮಧು ಬಂಗಾರಪ್ಪ, ಶಾಸಕರಾದ ತನ್ವೀರ್ ಸೇಠ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಂಜುನಾಥ್ ಭಂಡಾರಿ, ಮಾಜಿ ಶಾಸಕರಾದ ಎಚ್.ಆಂಜನೇಯ, ವಿ.ಆರ್.ಸುದರ್ಶನ್ ಉಪಸ್ಥಿತರಿದ್ದರು.

ಅಭ್ಯರ್ಥಿ ಯಾರು?: ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಮ್ಮ ಪುತ್ರ ಸಮರ್ಥ ಶಾಮನೂರು ಅವರಿಗೆ ಉಪ ಚುನಾವಣೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಶಾಮನೂರು ಕುಟುಂಬದಲ್ಲಿ ಒಬ್ಬರು ಸಚಿವರು, ಒಬ್ಬರು ಸಂಸದರು ಇದ್ದಾರೆ. ಆದ್ದರಿಂದ ಕುಟುಂಬಕ್ಕೆ ಟಿಕೆಟ್ ಬೇಡ ಎಂಬುದು ಬೇಡಿಕೆಯಾಗಿದೆ.

ಕಾಂಗ್ರೆಸ್​​ ಟಿಕೆಟ್‌ಗಾಗಿ ಸೈಯದ್ ಸೈಫುಲ್ಲಾ, ಅವರ ಪುತ್ರ ರಾಷ್ಟ್ರೀಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್, ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಹಾಗೂ ಅಯೂಬ್ ಪೈಲ್ವಾನ್ ಇನ್ನಿತರರು ​ ಆಕಾಂಕ್ಷಿಗಳಾಗಿದ್ದಾರೆ.

ಕ್ಷೇತ್ರದಲ್ಲಿ 80 ಸಾವಿರ ಮುಸ್ಲಿಂ ಮತಗಳಿವೆ. ಆದ್ದರಿಂದ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಬೇಡಿಕೆ ಇಡಲಾಗಿದೆ. ಆದರೆ ಇನ್ನೂ ಸಹ ಪಕ್ಷ ಅಭ್ಯರ್ಥಿ ಯಾರು? ಎಂಬ ಗುಟ್ಟು ಬಿಟ್ಟುಕೊಟ್ಟಿಲ್ಲ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular