HomeKarnatakaದಾವಣಗೆರೆ ದಕ್ಷಿಣ ಉಪ ಚುನಾವಣೆ: ಸಚಿವರ ಮಹತ್ವದ ಸಭೆ, ಅಭ್ಯರ್ಥಿ ಅಂತಿಮ?

ದಾವಣಗೆರೆ ದಕ್ಷಿಣ ಉಪ ಚುನಾವಣೆ: ಸಚಿವರ ಮಹತ್ವದ ಸಭೆ, ಅಭ್ಯರ್ಥಿ ಅಂತಿಮ?

ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ದಾವಣಗೆರೆ ದಕ್ಷಿಣದ ಉಪ ಚುನಾವಣೆ ಎದುರಾಗಿದೆ. ಉಪ ಚುನಾವಣೆಗೆ ಕಾಂಗ್ರೆಸ್‌ ಉಸ್ತುವಾರಿ ಸಮಿತಿ ರಚನೆ ಮಾಡಲಾಗಿದೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸಮಿತಿಯಲ್ಲಿದ್ದಾರೆ.

ಗುರುವಾರ ಉಪ ಚುನಾವಣೆಗೆ ಕಾಂಗ್ರೆಸ್‌ ಉಸ್ತುವಾರಿ ಸಮಿತಿಯ ಸದಸ್ಯರು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದರು. ಚುನಾವಣೆ ಕೆಲವೇ ದಿನಗಳಲ್ಲಿ ಘೋಷಣೆಯಾಗುವ ನಿರೀಕ್ಷೆ ಇದ್ದು, ಕಾರ್ಯತಂತ್ರದ ಕುರಿತು ಚರ್ಚಿಸಿದರು.

ಸಭೆಯಲ್ಲಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಜಮೀರ್ ಅಹ್ಮದ್ ಖಾನ್, ಕೆ.ಎಚ್.ಮುನಿಯಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್ ಮುಂತಾದವರು ಪಾಲ್ಗೊಂಡಿದ್ದರು. ಉಪ ಚುನಾವಣೆ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2008 ರಿಂದ 2023ರ ತನಕ ದಾವಣಗೆರೆ ದಕ್ಷಿಣದಲ್ಲಿ ಗೆಲ್ಲುವ ಮೂಲಕ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮಾಡಿದ್ದರು ಶಾಮನೂರು ಶಿವಶಂಕರಪ್ಪ. ಆದ್ದರಿಂದ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಕ್ಷೇತ್ರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ.

ಉಪ ಚುನಾವಣೆ ಕಾಂಗ್ರೆಸ್‌ ಟಿಕೆಟ್‌ಗಾಗಿ ಸೈಯದ್ ಸೈಫುಲ್ಲಾ, ಅವರ ಪುತ್ರ ರಾಷ್ಟ್ರೀಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್, ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಹಾಗೂ ಅಯೂಬ್ ಪೈಲ್ವಾನ್ ಇನ್ನಿತರರು ಆಕಾಂಕ್ಷಿಗಳಾಗಿದ್ದಾರೆ.

ಕಾಂಗ್ರೆಸ್ ಇನ್ನು ಸಹ ಅಭ್ಯರ್ಥಿ ಅಂತಿಮಗೊಳಿಸಿಲ್ಲ. ಶಾಮನೂರು ಶಿವಶಂಕರಪ್ಪ ಕುಟುಂಬದ ಅಭಿಪ್ರಾಯವನ್ನು ಪಡೆದು ಮುಂದುವರೆಯಲು ನಾಯಕರು ಚಿಂತನೆ ನಡೆಸಿದ್ದು, ಎಸ್.ಎಸ್.ಮಲ್ಲಿಕಾರ್ಜುನ ತಮ್ಮ ಪುತ್ರ ಸಮರ್ಥ ಶಾಮನೂರು ಅಭ್ಯರ್ಥಿಯಾಗಬೇಕು ಎಂದು ಬಯಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಸಚಿವರು ಕಾಂಗ್ರೆಸ್‌ ಉಸ್ತುವಾರಿ ಸಮಿತಿಯ ಸದಸ್ಯರು ಉಪಸ ಚುನಾವಣೆ ಕುರಿತು ಸಭೆ ಮಾಡಿದ್ದೇವೆ. ಅಭ್ಯರ್ಥಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡದಂತೆ ಪಕ್ಷ ಸೂಚಿಸಿದೆ. ಅಭ್ಯರ್ಥಿ ಯಾರು? ಎಂದು ಹೈಕಮಾಂಡ್ ನಾಯಕರು ತೀರ್ಮಾನ ಮಾಡಲಿದ್ದಾರೆ ಎಂದರು.

ದಾವಣಗೆರೆ ದಕ್ಷಿಣದಲ್ಲಿ ಸುಮಾರು 80,000 ಮುಸ್ಲಿಂಮರು ಇದ್ದಾರೆ. ಆದ್ದರಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇದೆ. ಆದರೆ ಶಾಮನೂರು ಕುಟುಂಬ ಟಿಕೆಟ್ ಬೇರೆಯವರಿಗೆ ನೀಡಲು ಒಪ್ಪಿಗೆ ಕೊಡಲಿದೆಯೇ? ಎಂಬುದು ಪ್ರಶ್ನೆಯಾಗಿದೆ.

ಶಾಮನೂರು ಕುಟುಂಬದಲ್ಲಿ ಎಸ್.ಎಸ್.ಮಲ್ಲಿಕಾರ್ಜುನ ಸಚಿವರು, ಅವರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ ಸಂಸದರು. ಆದ್ದರಿಂದ ಅವರ ಕುಟುಂಬಕ್ಕೆ ಟಿಕೆಟ್ ಬೇಡ. ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಿ ಎಂಬ ವಾದ ಜೋರಾಗಿದೆ.

ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಹ ಇನ್ನೂ ಅಭ್ಯರ್ಥಿ ಅಂತಿಮಗೊಳಿಸಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.

ದಾವಣಗೆರೆ ದಕ್ಷಿಣದ ಟಿಕೆಟ್ ವಿಚಾರದಲ್ಲಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ಎಸ್.ಎಸ್.ಮಲ್ಲಿಕಾರ್ಜುನ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ ಇಂದು ಉಭಯ ಸಚಿವರು ಒಟ್ಟಾಗಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಿಎಂ ಸಿದ್ದರಾಮಯ್ಯ ಇಬ್ಬರು ಸಚಿವರ ಜೊತೆ ಮಾತುಕತೆ ನಡೆಸಿ ಸಂಧಾನ ಮಾಡಿದ್ದರು. ಹೈಕಮಾಂಡ್ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದೆ ಎಂದು ಸಚಿವರಿಗೆ ಹೇಳಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular