HomeKarnatakaಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ: ಆಸ್ತಿ ಎಷ್ಟು?

ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ: ಆಸ್ತಿ ಎಷ್ಟು?

ಸಮರ್ಥ್ ಶಾಮನೂರು ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಹೆಸರು. ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಮೂಲಕ ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ಶಾಮನೂರು ಕುಟುಂಬ ಉಪ ಚುನಾವಣಾ ಕಣಕ್ಕೆ ಅಧಿಕೃತವಾಗಿ ಧುಮುಕಿದೆ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆಯೇ? ಎಂಬುದು ಇನ್ನೂ ಅಂತಿಮವಾಗಿಲ್ಲ.

ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣದ ಉಪ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.  ಸಮರ್ಥ್ ಶಾಮನೂರು ಕಾಂಗ್ರೆಸ್ ಅಭ್ಯರ್ಥಿಯಾಗಲು ವಿರೋಧವಿದೆ. ಆದರೆ ಶುಕ್ರವಾರ ಅವರು ತಾಯಿಯ ಜೊತೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮರ್ಥ್ ಶಾಮನೂರು ಕಾಂಗ್ರೆಸ್ ಅಭ್ಯರ್ಥಿಯಾಗದಿದ್ದರೆ ಮುಂದಿನ ನಡೆ ಏನು? ಎಂಬುದು ಚರ್ಚೆಯ ವಿಚಾರ. ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಬೇಕು ಎಂದು ಹಲವು ಸಚಿವರು, ಕಾಂಗ್ರೆಸ್ ನಾಯಕರು ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ.

 ಆಸ್ತಿ ವಿವರ: ಶುಕ್ರವಾರ ಸಮರ್ಥ್ ಶಾಮನೂರು ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅವರ ಆಸ್ತಿ ಎಷ್ಟು? ಎಂಬುದು ಚರ್ಚೆಯ ವಿಚಾರವಾಗಿದೆ.

ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿರುವ ಅಫಿಡೆವಿಟ್ ಪ್ರಕಾರ ಸಮರ್ಥ್ ಶಾಮನೂರು ಒಟ್ಟು ಆಸ್ತಿ ಮೌಲ್ಯ 4.25 ಕೋಟಿ ರೂ.ಗಳು. ಅವರ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳು ಇಲ್ಲ.

  • ಒಟ್ಟು ಆಸ್ತಿ ಮೌಲ್ಯ 4.25 ಕೋಟಿ ರೂ.ಗಳು
  • ನಗದು 8.35 ಲಕ್ಷ ರೂ.ಗಳು
  • ಒಟ್ಟು ಚರಾಸ್ಥಿ2.17 ಕೋಟಿ ರೂ.ಗಳು
  • ಸ್ಥಿರಾಸ್ಥಿ 2.08 ಕೋಟಿ ರೂ.ಗಳು
  • ಸಾಲ 3.52 ಕೋಟಿ ರೂ.ಗಳು

ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 2008, 2013, 2018 ಮತ್ತು 2023ರಲ್ಲಿ ಗೆದ್ದು ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆ ಮಾಡಿದ್ದಾರೆ. ಕ್ಷೇತ್ರವನ್ನು ಕುಟುಂಬದ ಹಿಡಿತದಲ್ಲೇ ಇಟ್ಟುಕೊಳ್ಳಬೇಕು ಎಂದು ಸಮರ್ಥ್ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಕೇಳಲಾಗಿದೆ.

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 23 ಕೊನೆಯ ದಿನವಾಗಿದೆ. ಒಟ್ಟು 8 ಅಭ್ಯರ್ಥಿಗಳು ಇದುವರೆಗೂ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ಶ್ರೀನಿವಾಸ್‌ ದಾಸಕರಿಯಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಶುಕ್ರವಾರ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಮಾರ್ಚ್ 23ರ ಸೋಮವಾರ ಬಿಜೆಪಿ ನಾಯಕರ ಸಮ್ಮುಖದಲ್ಲಿ, ಮೆರವಣಿಗೆ ಮೂಲಕ ಆಗಮಿಸಿ ಮತ್ತೊಂದು ಬಾರಿ ನಾಮಪತ್ರ ಸಲ್ಲಿಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಆದರೆ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಸಹ ಅಂತಿಮವಾಗಿಲ್ಲ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular