HomeKarnatakaದಾವಣಗೆರೆ ದಕ್ಷಿಣ ಉಪ ಚುನಾವಣೆ; ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ಉಪ ಚುನಾವಣೆ; ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿಲ್ಲ. ಆದರೆ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ಶುಕ್ರವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.

ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಕ್ಷೇತ್ರದ ಚುನಾವಣಾ ಕಾವು ಹೆಚ್ಚಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬಗ್ಗೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಪೂಜ್ಯ ಮಾವನವರಾದ ಶ್ರೀ ಶಾಮನೂರು ಶಿವಶಂಕರಪ್ಪಾಜಿಯವರ ಆಶೀರ್ವಾದ ಹಾಗೂ ಅವರ ಆಶಯದಂತೆ ಜೊತೆಗೆ ಜನರ ಅಪಾರ ಬೆಂಬಲ ಮತ್ತು ಪ್ರೇರಣೆಯಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಮ್ಮ ಪುತ್ರ ಸಮರ್ಥ್ ಶಾಮನೂರು ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಮಹತ್ವದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಯುವ ಮುಖಂಡರು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು’ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಿಕೆಟ್ ಸಿಗದಿದ್ದರೆ ಮುಂದೇನು?: ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಉಪ ಚುನಾವಣೆ ಟಿಕೆಟ್ ಬೇಡ ಎಂಬ ಚರ್ಚೆಯ ನಡುವೆಯೇ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದರು. ಆದರೆ ಕಾಂಗ್ರೆಸ್ ಟಿಕೆಟ್ ಸಿಗದಿದ್ದರೆ ಮುಂದಿನ ನಡೆ ಏನು? ಎಂಬುದು ಚರ್ಚೆಯ ವಿಚಾರವಾಗಿದೆ.

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿದ್ದಾರೆ.

ಶನಿವಾರ ಎರಡು ಕ್ಷೇತ್ರದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂಬ ಮಾಹಿತಿ ಇದೆ. ರಣದೀಪ್‌ ಸಿಂಗ್ ಸುರ್ಜೇವಾಲ ಜೊತೆ ಮಾತುಕತೆ ನಡೆಸಲು ಎಸ್.ಎಸ್.ಮಲ್ಲಿಕಾರ್ಜುನ್ ಬೆಂಗಳೂರು ನಗರಕ್ಕೆ ಆಗಮಿಸಿದ್ದಾರೆ. ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಬೆಂಗಳೂರಿಗೆ ಬರುವಂತೆ ಪಕ್ಷದ ನಾಯಕರು ಸೂಚನೆ ನೀಡಿದ್ದಾರೆ.

ಉಪ ಚುನಾವಣೆ ಟಿಕೆಟ್‌ ಸಮರ್ಥ್ ಶಾಮನೂರು ಅವರಿಗೆ ನೀಡಬೇಕು ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ ಒತ್ತಾಯಕ್ಕೆ ಮಣಿದು ಅವರನ್ನೇ ಅಭ್ಯರ್ಥಿ ಎಂದು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ.

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾದ ಉಪಾಧ್ಯಕ್ಷ ಶ್ರೀನಿವಾಸ್‌ ದಾಸಕರಿಯಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 23 ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular