HomeLatest Newsಉರುಳು ಸೇವೆ ಮಾಡಿ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ ಯುವಕರು!

ಉರುಳು ಸೇವೆ ಮಾಡಿ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ ಯುವಕರು!

ದಾವಣಗೆರೆ ದಕ್ಷಿಣ ಉಪ ಚುನಾವಣೆ ಕಣ ಅಂತಿಮವಾಗಿದೆ. ಏಪ್ರಿಲ್ 9ರಂದು ನಡೆಯುವ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪಟ್ಟು 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಉಪ ಚುನಾವಣೆಗೆ ಶ್ರೀನಿವಾಸ್‌ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್ ಸಮರ್ಥ್‌ ಶಾಮನೂರು ಅವರಿಗೆ ಟಿಕೆಟ್ ನೀಡಿದ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಉಂಟಾಗಿದ್ದು, ಸಾದಿಕ್ ಪೈಲ್ವಾನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರುತ್ತಿದ್ದು, ಶ್ರೀನಿವಾಸ್‌ ದಾಸಕರಿಯಪ್ಪ ಅವರನ್ನು ಬೆಂಬಲಿಸುತ್ತಿದ್ದಾರೆ. ಆದ್ದರಿಂದ ಉಪ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉರುಳು ಸೇವೆ ಮೂಲಕ ಕಾಂಗ್ರೆಸ್‌ಗೆ ವಿದಾಯ; ಶ್ರೀನಿವಾಸ್‌ ದಾಸಕರಿಯಪ್ಪ ಬೆಂಬಲಿಸಿ ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಈ ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ, ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular