HomeKarnatakaದಾವಣಗೆರೆ ದಕ್ಷಿಣದ ಉಪ ಚುನಾವಣೆ: ಶಾಮನೂರು ಕುಟುಂಬದ ಕೈತಪ್ಪಲಿದೆ ಟಿಕೆಟ್?

ದಾವಣಗೆರೆ ದಕ್ಷಿಣದ ಉಪ ಚುನಾವಣೆ: ಶಾಮನೂರು ಕುಟುಂಬದ ಕೈತಪ್ಪಲಿದೆ ಟಿಕೆಟ್?

ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಇದುವರೆಗೂ ನಡೆದ 4 ಚುನಾವಣೆಗಳಲ್ಲಿಯೂ  ಶಾಮನೂರು ಶಿವಶಂಕರಪ್ಪ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಸದ್ಯದ ಪ್ರಶ್ನೆ.

ಉಪ ಚುನಾವಣೆ ಟಿಕೆಟ್ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ನೀಡಬೇಕು ಎಂಬ ಒತ್ತಾಯವಿದೆ. ಆದರೆ ದಾವಣಗೆರೆ ಉತ್ತರದಲ್ಲಿ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಶಾಸಕರು, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು.

ಶಾಮನೂರು ಶಿವಶಂಕರಪ್ಪ ಸೊಸೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆ ಕ್ಷೇತ್ರದ ಸಂಸದರು. ಆದ್ದರಿಂದ ಉಪ ಚುನಾವಣೆ ಟಿಕೆಟ್ ಅನ್ನು ಶಾಮನೂರು ಶಿವಶಂಕರಪ್ಪ ಕುಟುಂಬದ ಹೊರತಾದ ಕಾರ್ಯಕರ್ತರಿಗೆ ನೀಡಬೇಕು ಎಂಬ ಬೇಡಿಕೆ ಕೇಳಿ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಿಕೆಟ್‌ಗಾಗಿ ಬೇಡಿಕೆ: ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ದಾವಣಗೆರೆ ದಕ್ಷಿಣದ ಉಪ ಚುನಾವಣೆ ಬಗ್ಗೆ ಮಾತನಾಡಿದ್ದಾರೆ. ಒಂದು ವೇಳೆ ಪಕ್ಷ ಶಾಮನೂರು ಶಿವಶಂಕರಪ್ಪ ಕುಟುಂಬದ ಹೊರತಾದ ವ್ಯಕ್ತಿಗೆ ಟಿಕೆಟ್ ನೀಡುವುದಾದರೆ ತಮ್ಮ ಸಹೋದರನಿಗೆ ಟಿಕೆಟ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

“ಪಕ್ಷದಲ್ಲಿ ಸಾಮಾನ್ಯ ಸಂಪ್ರದಾಯದಂತೆ ಯಾವ ಕುಟುಂಬದಲ್ಲಿ ಸಾವು ಸಂಭವಿಸಿರುತ್ತದೆಯೋ ಆ ಕುಟುಂಬದವರಿಗೆ ಉಪ ಚುನಾವಣೆ ಟಿಕೆಟ್ ನೀಡಲಾಗುತ್ತದೆ. ಅದರಂತೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಮೊದಲ ಆದ್ಯತೆ ನೀಡಲಿ. ಹೈಕಮಾಂಡ್ ಯಾರನ್ನು ಅಭ್ಯರ್ಥಿಯಾಗಿ ಮಾಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ” ಎಂದರು.

“ಒಂದು ವೇಳೆ ಕ್ಷೇತ್ರದ ಟಿಕೆಟ್ ಶಾಮನೂರು ಶಿವಶಂಕರಪ್ಪ ಕುಟುಂಬದ ಹೊರತಾದ ವ್ಯಕ್ತಿಗೆ ನೀಡುವುದಾದದರೆ ನಮ್ಮ ಸಹೋದರನಿಗೆ ಟಿಕೆಟ್ ನೀಡಲಿ, ನಾನು ಚುನಾವಣೆ ನಡೆಸುತ್ತೇನೆ. ಒಂದು ವೇಳೆ ನನ್ನ ಅಣ್ಣನಿಗೆ ಟಿಕೆಟ್ ಕೊಟ್ಟರೂ ತಪ್ಪಿಪ್ಪ. ಪಕ್ಷಕ್ಕೆ ನಿರಂತರವಾಗಿ ಸೇವೆ ಸಲ್ಲಿಸಿಕೊಂಡು ಬಂದಿರುವ ಅಣ್ಣನಿಗೆ ಟಿಕೆಟ್ ಸಿಕ್ಕರೆ ಖಂಡಿತ ಚುನಾವಣೆಯನ್ನು ನಾನು ಮಾಡುತ್ತೇನೆ” ಎಂದು ಶಾಸಕರು ಹೇಳಿದರು.

94 ವರ್ಷದ ಶಾಮನೂರು ಶಿವಶಂಕರಪ್ಪ ಡಿಸೆಂಬರ್ 14ರಂದು ನಿಧನ ಹೊಂದಿದರು. ಅವರು ದಾವಣಗೆರೆ ದಕ್ಷಿಣ ಕ್ಷೇತ್ರದ ಹಾಲಿ ಶಾಸಕರಾಗಿದ್ದರು. ಆದ್ದರಿಂದ ಈಗ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.

2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ದಾವಣಗೆರೆ ದಕ್ಷಿಣ ಕ್ಷೇತ್ರ ರಚನೆಗೊಂಡಿತು. ಬಳಿಕ ನಡೆದ 4 ಚುನಾವಣೆಗಳಲ್ಲಿ ಶಾಮನೂರು ಶಿವಶಂಕರಪ್ಪ ಕ್ಷೇತ್ರದಲ್ಲಿ ಗೆದ್ದಿದ್ದು, ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆ ಮಾಡಿದ್ದಾರೆ.

2008ರಲ್ಲಿ ಶಾಮನೂರು ಶಿವಶಂಕರಪ್ಪ 41,675, 2013ರಲ್ಲಿ 66,320, 2018ರಲ್ಲಿ 71,369 ಮತ್ತು 2023ರಲ್ಲಿ 84,298 ಮತಗಳನ್ನು ಪಡೆದು ಜಯಗಳಿಸಿದ್ದರು. ಕ್ಷೇತ್ರದಲ್ಲಿ ಇನ್ನೂ ಸಹ ಬಿಜೆಪಿ ಗೆಲ್ಲಲು ಸಾಧ್ಯವಾಗಿಲ್ಲ ಎಂಬುದಕ್ಕೆ ಶಾಮನೂರು ಶಿವಶಂಕರಪ್ಪ ಪ್ರಭಾವ ಕಾರಣ. ಆದರೆ ಈಗ ಅವರ ಅನುಪಸ್ಥಿತಿಯಲ್ಲಿ ಉಪ ಚುನಾವಣೆ ನಡೆಯಬೇಕಿದೆ.

2023ರ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಪ್ರಭಾವದ ನಡುವೆಯೂ ದಾವಣಗೆರೆ ದಕ್ಷಿಣದ ಟಿಕೆಟ್‌ಗಾಗಿ 5 ನಾಯಕರು ಅರ್ಜಿ ಸಲ್ಲಿಸಿದ್ದರು. ವಯಸ್ಸಿನ ಕಾರಣಕ್ಕೆ ಶಾಮನೂರು ಶಿವಶಂಕರಪ್ಪಗೆ ಟಿಕೆಟ್ ಸಿಗುವುದಿಲ್ಲ ಎಂಬುದು ನಿರೀಕ್ಷೆಯಾಗಿತ್ತು. ಆದರೆ ಪಕ್ಷ ಅವರಿಗೆ ಟಿಕೆಟ್ ನೀಡಿತು, ಚುನಾವಣೆಯಲ್ಲಿ ಗೆದ್ದರು.

ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಂ ಸಮಯದಾಯದ ಪ್ರಭಾವವಿದೆ. ಅವರು ಶಾಮನೂರು ಶಿವಶಂಕರಪ್ಪ ಕುಟುಂಬ ಬೆಂಬಿಸಿಕೊಂಡು ಬಂದಿದ್ದರು. ಆದರೆ ಈಗ ಉಪ ಚುನಾವಣೆಯಲ್ಲಿ ಮುಸ್ಲಿಂ ಸಮದಾಯದ ನಾಯಕನಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ.

ಶಾಮನೂರು ಶಿವಶಂಕರಪ್ಪ ಕುಟುಂಬದಲ್ಲಿ ಶಾಮನೂರು ಶಿವಶಂಕರಪ್ಪ ಹಿರಿಯ ಪುತ್ರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಸ್.ಬಕ್ಕೇಶ್, ಉದ್ಯಮಿ ಎಸ್.ಎಸ್.ಗಣೇಶ್, ಎಸ್.ಎಸ್.ಮಲ್ಲಿಕಾರ್ಜುನ ಮತ್ತು ಡಾ.ಪ್ರಭಾ ಮಲ್ಲಿಕಾರ್ಜುನ ಪುತ್ರ ಸಮರ್ಥ ಶಾಮನೂರು ಅಭ್ಯರ್ಥಿಯಾಗಬಹುದು ಎಂಬ ಚರ್ಚೆಗಳು ಜೋರಾಗಿವೆ. ಪಕ್ಷದ ನಿಲುವು ತಿಳಿದು ಮುಂದುವರೆಯಲು ಶಾಮನೂರು ಶಿವಶಂಕರಪ್ಪ ಕುಟುಂಬ ತೀರ್ಮಾನಿಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular